Breaking News

ಹುಲಕುಂದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಗೋವಿಂದ ಕಾರಜೋಳ

Spread the love

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ ಆರು ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

 

ವಾಹನ ಅಪಘಾತದಲ್ಲಿ16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ ಎಂದರು.

ಮೃತರ ಕುಟುಂಬಕ್ಕೆ ಆಗಿರುವ ದುಃಖ ಹಾಗೂ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ