Breaking News

ಬೆಳಗಾವಿ: ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತ; 6 ಮಂದಿ ಮೃತ್ಯು

Spread the love

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ.

ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನುಮವ್ವ ಮ್ಯಾಗಾಡಿ (25), ದೀಪಾ (31), ಸವಿತಾ (17), ಸುಪ್ರೀತಾ (11), ಮಾರುತಿ (42) ಮತ್ತು ಇಂದ್ರವ್ವ(24) ಮೃತಪಟ್ಟವರು ಎಂದು ಗುರುತಿಸಲಾಗಿದೆ.

 

ವಾಹನವು ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ ಅದರಲ್ಲಿದ್ದ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಅವರು ಘಟನೆ ನಡೆದ ಸ್ಥಳದ ಪರಿಶೀಲನೆ ನಡೆಸಿದರು. ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐದು ಲಕ್ಷ ಪರಿಹಾರ: ಬೆಳಗಾವಿ, ರಾಮದುರ್ಗ ತಾಲ್ಲೂಕಿನ ಚಿಂಚನೂರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪ್ರಕಟಿಸಿದ್ದಾರೆ


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ