ಬಳ್ಳಾರಿ: ನಾನು ಜನರ ಸೇವೆ ಮಾಡುವ ನಿಯತ್ತಿನ ನಾಯಿ ಇದ್ದಂತೆ ಎನ್ನುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಗರದ ವಿಮ್ಸ್ ಆವರಣದಲ್ಲಿ 400 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರು ನಾಯಿ ಮರಿಯಂತೆ ಪ್ರಧಾನಿ ಮೋದಿ ಮುಂದೆ ಗಡಗಡ ನಡುಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಹೇಳಿಕೆಗೆ ಮುಂಬರುವ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ಇಂತಹ ಹೇಳಿಕೆ ಅವರ ವ್ಯಕ್ತಿತ್ವ ತೋರಿಸುತ್ತದೆ ಎಂದರು.
ನಾಯಿ ನಿಯತ್ತಿನ ಪ್ರಾಣಿ. ನಾನು ಜನರಿಗಾಗಿ ನಿಯತ್ತಾಗಿ ಕೆಲಸ ಮಾಡುತ್ತಿದ್ದೇನೆ. ಜನರ ಪರವಾಗಿ ಈ ನಿಯತ್ತು ಉಳಿಸಿಕೊಂಡು ಹೋಗುತ್ತೇನೆ. ನಾನು ಸಿದ್ದರಾಮಯ್ಯ ರೀತಿ ಸಮಾಜ ಒಡೆಯುವ ಕೆಲಸ ಮಾಡಲ್ಲ. ಸೌಭಾಗ್ಯ ಕೊಡುತ್ತೇವೆಂದು ದೌರ್ಭಾಗ್ಯ ಕೊಟ್ಟಿಲ್ಲ. ಸುಳ್ಳು ಹೇಳಿಲ್ಲ. ಈ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಸಿದ್ದರಾಮಯ್ಯ ಬಳಿ ರಾಜ್ಯಕ್ಕೆ ನಯಾಪೈಸೆ ತರಲು ಆಗಲಿಲ್ಲ. ರಾಜ್ಯಕ್ಕೆ ಅವರ ಕೊಡುಗೆ ಏನೂ ಇಲ್ಲ ಎಂದರು.
Laxmi News 24×7