Home / ರಾಜಕೀಯ / ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

Spread the love

ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್‌ ಸೊಸೈಟಿ ಆಫ್‌ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್‌.ಅಂಬೇಡ್ಕರ್‌ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್‌ ಹೇಳಿದರು.

 

ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್‌.ಅಂಬೇಡ್ಕರ್‌ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸದ್ಯ ದೇಶದಲ್ಲಿ ಡಾ| ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನ ಬದಲಿಸುವ ಪ್ರಯತ್ನಗಳು ನಡೆದಿವೆ. ದಲಿತರಿಗಾಗಿ ಡಾ. ಅಂಬೇಡ್ಕರ್‌ ಅವರು ಪಟ್ಟಿರುವ ಶ್ರಮವನ್ನು ನಾವಿಂದು ನೆನಪಿಸಿ ಮುನ್ನಡೆಯಬೇಕಿದೆ. ಡಾ| ಅಂಬೇಡ್ಕರರು ಇಲ್ಲವಾಗಿದ್ದರೆ ನಾವು ಎಲ್ಲಿ ಇರುತ್ತಿದ್ದೇವೆ ಎಂದು ಗೊತ್ತಾಗುತ್ತಿರಲಿಲ್ಲ ಎಂದು ನುಡಿದರು.

ಡಾ| ಅಂಬೇಡ್ಕರ್‌ ಅವರಿಗೆ ಶಾಹು ಮಹಾರಾಜ, ಮಹಾತ್ಮ ಫುಲೆ, ಶಿವಾಜಿ ಮಹಾರಾಜರು ನೀಡಿದ ಪ್ರೇರಣೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯಇಲ್ಲ. ಅಲ್ಲದೆ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಯಾರು ಮರೆಯುವಂತಿಲ್ಲ. ಸದ್ಯ ಭಾರತ ಸರಕಾರ 5ನೇ ತರಗತಿ ಮೇಲಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ ಮಾಡಲು ಹೊರಟಿದೆ. ವೇದ ಕಲಿಸಿ ನಮ್ಮನ್ನು ಮತ್ತೆ ಶೂದ್ರರಾಗಿ ಕಾಣುವ ಕಾಲ ಬರಬಹುದು. ಸದ್ಯ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲವನ್ನು ವ್ಯಾಪಾರೀಕರಣ ಮಾಡಲಾಗುತ್ತಿದೆ.

https://fb.watch/hVSAEPwrIC/?mibextid=RUbZ1f

ದೇಶದಲ್ಲಿ ಶಿಕ್ಷಣವನ್ನು ಹಿಂದಿ ಭಾಷೆಯಲ್ಲಿ ಕಲಿಸುವ ಹುನ್ನಾರ ನಡೆಯುತ್ತಿದೆ. ಇದರಿಂದ ನಮ್ಮ ಹಿಂದೂಳಿದ ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ನುಡಿದರು. 205 ವರ್ಷಗಳ ಹಿಂದೆ ಪೇಶ್ವೆಗಳ ವಿರುದ್ದ ಮಹಾರರು ಗಳಿಸಿದ ವಿಜಯವು ಭಾರತದ ಇತಿಹಾಸದಲ್ಲಿ ದಾಖಲು ಆಗಲೇ ಇಲ್ಲ. ಮನುವಾದಿಗಳು ಅಂಥ ಸತ್ಯವನ್ನು ದಾಖಲಿಸಲೇ ಇಲ್ಲ. ಈಗ ಪುಃನ ಸತ್ಯವನ್ನು ದೇಶದ ಜನರಿಗೆ ತಿಳಿಸುವ ಕಾಲ ಬಂದಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ