Breaking News

ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿ

Spread the love

ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಾವೇರಿ: ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ನಂತರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಶಿ ಈ ವಿಷಯ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಜೊತೆ ಇಂದು ನಡೆದ ಸಭೆಯಲ್ಲಿ ಮಂಡ್ಯದಲ್ಲಿ ಹೆಚ್ಚಿನ ಸದಸ್ಯರು ಸಮ್ಮೇಳನ ನಡೆಸಲು ಒಲವು ತೋರಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಹಾವೇರಿಯಲ್ಲಿ ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಇಂದು ಕಾರ್ಯಕಾರಿಣಿ ಸಮಿತಿ ಸಭೆ ನಡೆದಿದ್ದು, 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ನಡೆಸುವಂತೆ ಮನವಿ ಮಾಡಿದರು. ಈ ಮನವಿಗೆ ಹೆಚ್ಚಿನ ಜನರು ಬೆಂಬಲ ಸೂಚಿಸಿದ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ನಡೆಸಲು ನಿರ್ಧರಿಸಲಾಯಿತು.

Spread the love

About Laxminews 24x7

Check Also

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ

Spread the loveತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ