ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಶುರು ಮಾಡಿವೆ. ತಮ್ಮ ಮತದಾರರನ್ನು ಸೆಳೆಯಲು ಹೊಸ ಹೊಸ ಆಫರ್ಗಳ ಮೊರೆ ಹೋಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್(Gift Politics) ಬಗ್ಗೆ ಸುದ್ದಿಯಾಗಿತ್ತು. ಆದ್ರೆ ಈಗ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ. ನಿಜವಾದ ಅಭಿವೃದ್ಧಿ ಮಾಡಿದ್ರೆ ಆಣೆ ಪ್ರಮಾಣ ಏಕೆ ಮಾಡಿಸ್ತಿದ್ರಿ? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚೇಲಾಗಳು ಪ್ರತಿ ಮನೆಗೆ ತೆರಳಿ ಆಣೆ ಮಾಡಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರು ವಿರೋಧ ಮಾಡುತ್ತಿದ್ದಾರೆ. ನಮಗೆ ವೋಟ್ ಹಾಕಬೇಕು ಅಂತಾ ಆಣೆ ಮಾಡಿಸುತ್ತಿದ್ದಾರೆ. ಈ ರೀತಿಯ ನೀಚ ರಾಜಕಾರಣ ವಿರೋಧ ಮಾಡುತ್ತಿದ್ದೇನೆ. ಇನ್ನೂರು ರೂ. ವಸ್ತು ನೀಡಿ ವೋಟ್ ಹಾಕಬೇಕೆಂದು ಆಣೆ ಮಾಡಿಸುತ್ತಿದ್ದೀರಾ? ಥೂ ಇಂತಹ ರಾಜಕಾರಣಕ್ಕೆ ಎಂದು ಧನಂಜಯ ಜಾಧವ್ ಕಿಡಿಕಾರಿದ್ದಾರೆ.