Breaking News

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ

Spread the love

ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರದಲ್ಲಿ ಆಗಮಿಸಲಿದ್ದು,ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ