Breaking News

ಡಿ.ಕೆ ಶಿವಕುಮಾರ್ ಭೇಟಿಯಾದ ಶಾಸಕ H.ನಾಗೇಶ್ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..?

Spread the love

ಬೆಂಗಳೂರು : ಪಕ್ಷೇತರ ಶಾಸಕ ಹೆಚ್. ನಾಗೇಶ್ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಪಕ್ಷೇತರ ಶಾಸಕನಾಗಿದ್ದರೂ ಬಿಜೆಪಿ ಬೆಂಬಲಿಸಿರುವ ನಾಗೇಶ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದಾರೆ.

ಇದೀಗ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮೂಡಿದೆ.

ಕೆಲವು ತಿಂಗಳುಗಳ ಹಿಂದೆಯೇ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಆದರೆ ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ. ಮಹತ್ತರದ ಬೆಳವಣಿಗೆಯಲ್ಲಿ ಡಿಕೆಶಿಯನ್ನು ನಾಗೇಶ್ ಭೇಟಿಯಾಗಿದ್ದು, ಶೀಘ್ರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬುದನ್ನು ಕಾದು ನೋಡಬೇಕಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ