Breaking News

ಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ

Spread the love

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ.

ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು.

ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ಈಗ ಆಸ್ಕರ್‌ ಒಪ್ಪಿಕೊಂಡಿದ್ದು, ಆ ಮೂಲಕ ʼಕಾಂತಾರʼ ಸಿನಿಮಾ ಕೂಡ ಆಸ್ಕರ್ ರೇಸ್‌ ನಲ್ಲಿ ಕಾಣಿಸಿಕೊಳ್ಳಲಿದೆ.‌ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವೀಟ್‌ ಮಾಡಿ ವಿಷಯವನ್ನು ಹಂಚಿಕೊಂಡಿದೆ.

‘ಕಾಂತಾರ’ ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ! ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದಿದೆ.

ಉತ್ತಮ ಚಿತ್ರ ಹಾಗೂ ಉತ್ತಮ ನಟ ವಿಭಾಗದಲ್ಲಿ 301 ಸಿನಿಮಾಗಳೊಂದಿಗೆ ʼಕಾಂತಾರʼ ಪ್ರಶಸ್ತಿಗೆ ಸೆಣಸಾಟ ನಡೆಸಲಿದೆ.

ಪ್ಯಾನ್‌ ಇಂಡಿಯಾದಲ್ಲಿ ʼಕಾಂತಾರ; ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತ್ತು. ಈ ವರ್ಷದ ಆಸ್ಕರ್ ಪ್ರಶಸ್ತಿಯ ಅಂತಿಮ ನಾಮನಿರ್ದೇಶನ ಜ. 24ರಂದು ಘೋಷಣೆಯಾಗಲಿದೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ