Breaking News

ಬಿಜೆಪಿಯವರದ್ದು ಬೆನ್ನು ಮೂಳೆ ಇಲ್ಲದ ರಾಜಕೀಯ: ಹಿಂದಿ ದಿವಸ್ ವಿರುದ್ಧ ಜೆಡಿಎಸ್ ಆಕ್ರೋಶ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಹಿಂದಿ ದಿವಸ ಆಚರಣೆಯ ವಿರುದ್ಧ ಜೆಡಿಎಸ್ ಕಿಡಿಕಾರಿದ್ದು, ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ.

ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ‌ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ? ಒಂದು ಭಾಷೆಯ ವೈಭವೀಕರಣದಿಂದಾಗಿ ಭಾರತದ ಅನ್ಯ ಭಾಷೆಗಳ ಶ್ರೀಮಂತಿಕೆಯನ್ನು ಗೌಣವಾಗಿಸುವ ಈ ಹುನ್ನಾರಕ್ಕೆ ಕನ್ನಡಿಗರ ಪ್ರಬಲ ವಿರೋಧವಿದೆ ಎಂದಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ