Breaking News

ಕಳಸಾ ತಿರುವು ಯೋಜನೆ: ಪರಿಶೀಲನೆ

Spread the love

ವದೆಹಲಿ: ಮಹದಾಯಿ ಯೋಜನೆಯ ಭಾಗವಾದ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್‌ ಮೀಸಲು ಅರಣ್ಯ ಬಳಕೆಗೆ ಪರಿಸರ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಸಹಾಯಕ ಮಹಾನಿರ್ದೇಶಕರು (ಎಐಜಿ) ಯೋಜನಾ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ 

 

ಈ ಯೋಜನೆಗೆ ಬೆಳಗಾವಿ ಜಿಲ್ಲೆಯಖಾನಾಪುರ ತಾಲ್ಲೂಕಿನ ಏಳು ಗ್ರಾಮಗಳ ಅರಣ್ಯ ಬಳಸಲು (ಜಾಕ್‌ವೆಲ್‌ ನಿರ್ಮಾಣ, ಪಂಪ್‌ ಹೌಸ್‌, ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌, ಪೈಪ್‌ಲೈನ್‌ಗೆ) ಒಪ್ಪಿಗೆ ನೀಡುವಂತೆ ಎಸಿಎಸ್‌ ಅವರು ಸಚಿವಾಲಯಕ್ಕೆ 2022ರ ಡಿಸೆಂಬರ್ 30ರಂದು ಪ್ರಸ್ತಾವನೆ ಸಲ್ಲಿಸಿದ್ದರು.

ಈ ವಿಷಯದ ಬಗ್ಗೆ ಇನ್ನಷ್ಟು ವಿವರಣೆ ನೀಡುವಂತೆ ಕರ್ನಾಟಕ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್‌) ಜಾವೆದ್‌ ಅಖ್ತರ್‌ ಅವರಿಗೆ ಪರಿಸರ ಸಚಿವಾಲಯದ ಸಮಗ್ರ ಪ್ರಾದೇಶಿಕ ಕೇಂದ್ರದ ಉಪ ಮಹಾನಿರ್ದೇಶಕ ಎಂ.ಕೆ.ಶಂಭು ಅವರು ಜನವರಿ 5ರಂದು ಪತ್ರ ಬರೆದು ಸೂಚಿಸಿದ್ದಾರೆ. ಈ ಯೋಜನಾ ಪ್ರದೇಶವು ವನ್ಯಜೀವಿ ಧಾಮ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ ಸಮೀಪದಲ್ಲಿದೆ. ಹೀಗಾಗಿ, ಮುಖ್ಯ ವನ್ಯಜೀವಿ ವಾರ್ಡನ್‌ (ಪಿಸಿಸಿಎಫ್‌) ಅವರು ಸೂಕ್ತ ಶಿಫಾರಸು ಹಾಗೂ ಪರಿಹಾರ ಕ್ರಮಗಳ ವಿವರಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ