ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೇವಲ ಹಿಂದುತ್ವದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ನಟ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಒಲವಿಲ್ಲ. ಆದರೆ, ಗೀತಕ್ಕ ಚುನಾವಣೆಯಲ್ಲಿ ನನ್ನ ಜೊತೆ ಬಂದೇ ಬರುತ್ತಾರೆ. ನಾನು ಸೊರಬ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಅವರು ಪ್ರಚಾರಕ್ಕೆ ಬರುತ್ತಾರೆ. ಅಕ್ಕ ಗೀತ ಇದುವರೆಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ. ಕಾದು ನೋಡುತ್ತಿರಿ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
Laxmi News 24×7