Breaking News
Home / ರಾಜಕೀಯ / ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಾರು? ಇಲ್ಲಿದೆ ಕುತೂಹಲಕರ ಮಾಹಿತಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಾರು? ಇಲ್ಲಿದೆ ಕುತೂಹಲಕರ ಮಾಹಿತಿ

Spread the love

ಬೆಂಗಳೂರು, ಜನವರಿ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವಲ್ಲಿ ನಿರತವಾಗಿವೆ. ಜೆಡಿಎಸ್‌ 93 ಅಭ್ಯರ್ಥಿಗಳನ್ನು ಘೋಷಿಸಿದೆ. ಸಂಕ್ರಾಂತಿ ಸಮಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಹೊರತರಲು ಸಿದ್ದತೆ ಮಾಡಿಕೊಂಡಿದೆ.

ಆಡಳಿತಾರೂಢ ಬಿಜೆಪಿ ಪಕ್ಷ ಫೆಬ್ರವರಿ ಅಂತ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು. ಆ ಹೊತ್ತಿಗೆ ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳು ಹೊರಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯತಂತ್ರವೇನು ಎಂಬುದರ ಬಗ್ಗೆ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದ

ಬಜೆಟ್‌ ತಯಾರಿಕೆಯಲ್ಲಿ ನಿರತರಾಗಿರು ಬೊಮ್ಮಾಯಿಬಿಜೆಪಿಯ ಹಿರಿಯ ಮುಖಂಡರ ಪ್ರಕಾರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕ್ರಾಂತಿ ನಂತರ ಬಜೆಟ್ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಮತದಾರರನ್ನು ಓಲೈಸಲು ಇದು ಅಂತಿಮ ಬಜೆಟ್ ಆಗಿರುವುದರಿಂದ ಪಕ್ಷದ ಸಾಧನೆಯನ್ನು ಎತ್ತಿ ತೋರಿಸುವುದು ಬಹಳ ಮುಖ್ಯ. ಈ ವರ್ಷ ಅಧಿಕಾರವನ್ನು ಉಳಿಸಿಕೊಂಡರೆ ಪಕ್ಷವು ಜನರಿಗೆ ಏನು ಮಾಡಲಿದೆ ಎಂಬುದನ್ನು ಜನರಿಗೆ ತಿಳಿಸಲು ಬೊಮ್ಮಾಯಿ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್‌ ಶಾಸಕರಿಗೆ ಹೇಳಿದ್ದೇನು?

ಬಿಜೆಪಿ ಹಲವಾರು ಅಭ್ಯರ್ಥಿಗಳಿಗೆ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಮೌಖಿಕವಾಗಿ ನಿರ್ದೇಶಿಸಿದೆ. ಮೂಲಗಳ ಪ್ರಕಾರ, ಸುಮಾರು 80-85 ಶೇಕಡಾ ಹಾಲಿ ಶಾಸಕರು ತಮ್ಮ ಟಿಕೆಟ್‌ಗಳನ್ನು ಮರಳಿ ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

‘ರಾಜಾಜಿನಗರ ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತಮ್ಮ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರವನ್ನು ಪೂರ್ಣಗೊಳಿಸಿದ್ದಾರೆ. ಪ್ರತ್ಯೇಕವಾಗಿ 10,000 ಮನೆಗಳನ್ನು ತಲುಪಿದ್ದಾರೆ. ಅಲ್ಲದೆ, ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಸತಿ ಸಚಿವ ವಿ. ಸೋಮಣ್ಣ ಅವರ ನಿವಾಸಕ್ಕೆ ತಡರಾತ್ರಿ ಭೇಟಿ ನೀಡಿದ್ದಾರೆ. ಪಕ್ಷವು ಗೆಲ್ಲುವ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದರ ಪರವಾಗಿದೆ. ಅಂತಹ ಯಾವುದೇ ಅಭ್ಯರ್ಥಿಗಳು ಪಕ್ಷ ತೊರೆಯಲು ಅವಕಾಶ ನೀಡುವುದಿಲ್ಲ ಎಂಬುದನ್ನು ಈ ಭೇಟಿ ಸೂಚಿಸುತ್ತದೆ’ ಎಂದು ಮೂಲವು ವಿವರಿಸಿದೆ.

 ಪಕ್ಷಾಂತರ ಶಾಸಕರಿಗೆ ಟಿಕೆಟ್‌ ಖಚಿತ

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ತೊರೆದು ಬಿಜೆಪಿ ಸೇರಿದ 16 ಶಾಸಕರಲ್ಲಿ ಬಹುತೇಕರಿಗೆ ಟಿಕೆಟ್ ಖಚಿತವಾಗಿದೆ. ಆದರೆ, ಅಥಣಿ ಶಾಸಕ ಮಹೇಶ ಕುಮಟಹಳ್ಳಿ ಬದಲು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅವಕಾಶ ಮಾಡುವ ಬಗ್ಗೆ ಚಿಂತನೆ ನಡೆದಿದೆ.

‘ಪಕ್ಷದಲ್ಲಿ ಜಯಗಳಿಸಬಹುದಾದ 60 ಶಾಸಕರಿದ್ದಾರೆ. ಅಂತಹ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡುವಂತೆ ಪಕ್ಷ ಸೂಚಿಸಿದೆ. ಅಂತಹ ಅಭ್ಯರ್ಥಿಗಳಿಗೆ ಸರ್ಕಾರವು ಭಾರಿ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಚುನಾವಣೆಯಲ್ಲಿ ಪಕ್ಷವು 60 ಅಭ್ಯರ್ಥಿಗಳನ್ನು ಬದಲಾಯಿಸುವುದಿಲ್ಲ ಎಂಬುದಂತೂ ಖಚಿತವಾಗಿದೆ’ ಎಂದು ಇನ್ನೊಂದು ಮೂಲ ತಿಳಿಸಿವೆ.

 ರಾಜ್ಯದಲ್ಲೂ ಹೊಸ ಮುಖಗಳಿಗೆ ಮಣೆ?

ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ, ಹೊಸ ವ್ಯಕ್ತಿಗಳನ್ನು ಕಣಕ್ಕಿಳಿಸುವ ಬಗ್ಗೆ ಯೋಚಿಸಲಾಗಿತ್ತು. ಹಲವಾರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗುವುದು ಎಂದು ಬಿಜೆಪಿಯಲ್ಲಿ ಬಲವಾದ ಊಹೆಗಳಿಗದ್ದವು. ಆದರೆ, ಪಕ್ಷದ ಹಲವು ಮುಖಂಡರು ಇದಕ್ಕೆ ವಿರುದ್ಧವಾಗಿ ವಾದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಮಿಕ ಸಚಿವ ಆರ್.ಅಶೋಕ ( ಪದ್ಮನಾಭನಗರ ), ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ( ಮಲ್ಲೇಶ್ವರಂ ) ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ( ಚಿಕ್ಕಮಗಳೂರು ) ಅವರ ಬದಲು ಪಕ್ಷದ ಕಾರ್ಯಕರ್ತರು ಕಣಕ್ಕಿಳಿಸಲು ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬಂದಿವೆ. ಅವರು ಬೇರೆ ಕ್ಷೇತ್ರಗಳಿಗೆ ತೆರಳಬೇಕು ಎಂಬ ಬೇಡಿಕೆ ಪಕ್ಷದೊಳಗೆ ಇದೆ. ಇದು ಕೂಡ ಅಸಂಭವ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ