Breaking News

ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ

Spread the love

ಮೈಸೂರು: ಕುಖ್ಯಾತ ಕ್ರಿಮಿನಲ್‌, ರಾಜಕಾರಣಿಗಳು, ಅಧಿಕಾರಿಗಳ ಅಪ್ತ ಸಖನೆಂದು ಗುರುತಿಸಿಕೊಂಡಿರುವ ಮೈಸೂರಿನ ಕೆ.ಎಸ್‌. ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ (Santro Ravi Case) ತಾನೇ ಸ್ವತಃ ಈ ವಿಚಾರಗಳನ್ನು ಒಪ್ಪಿಕೊಂಡಿದ್ದಾನೆ.

ತಾನೊಬ್ಬ ಬಿಜೆಪಿ ಕಾರ್ಯಕರ್ತ, ಪೊಲೀಸ್‌ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರ ವರ್ಗಾವಣೆ ಮಾಡಿಸಿದ್ದು ನಿಜ. ವೇಶ್ಯಾವಾಟಿಕೆ ದಂಧೆಯ ಆರೋಪವಿರುವುದು ನಿಜ ಎಂದೆಲ್ಲ ಲಿಖಿತವಾಗಿ ಒಪ್ಪಿಕೊಂಡಿದ್ದಾನೆ. ೨೦೨೨ರ ಜನವರಿ ೨೨ರಂದು ಪ್ರಕರಣವೊಂದು ದಾಖಲಾದಾಗ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಸ್ವತಃ ಸ್ಯಾಂಟ್ರೋ ರವಿಯೇ ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಅದರಲ್ಲಿ ಆತನ ಎಲ್ಲ ಕರಾಳ ಕೃತ್ಯಗಳ ವಿವರ ಇದೆ. ಆದರೆ, ಪೊಲೀಸರು ಇದೆಲ್ಲವನ್ನೂ ಬರೆದಿಟ್ಟುಕೊಂಡು ಸುಮ್ಮನಿದ್ದರು. ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ!

ಅದು ರಾಜರಾಜೇಶ್ವರಿ ನಗರದ ನಿವಾಸಿಯಾಗಿರುವ ಜಗದೀಶ್‌ ಎಂಬವರು ನೀಡಿದ ಒಂದು ದೂರು. ಗಟ್ಟಿಗೆರೆ ನಿವಾಸಿಯಾಗಿರುವ ಅವರು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರಿಗೆ ಸ್ಯಾಂಟ್ರೋ ರವಿಯ ಖತರ್ನಾಕ್‌ ಕೃತ್ಯಗಳ ಬಗ್ಗೆ ದೂರು ನೀಡಿದ್ದರು. ರಾಜರಾಜೇಶ್ವರಿ ನಗರದ ಬಾಲಕೃಷ್ಣ ರಂಗ ಮಂದಿರದ ಮುಂಭಾಗದಲ್ಲಿ ವಾಸ ಮಾಡುತ್ತಿರುವ ಮಂಜುನಾಥ್‌ ಎಂಬಾತ ತಾನು ರಾಜಕೀಯ ಮುಖಂಡರ ಜತೆ ಸಂಬಂಧ ಹೊಂದಿದ್ದೇನೆ, ನನ್ನ ಹೆಂಡತಿ ಹೈಕೋರ್ಟ್‌ ಲಾಯರ್‌, ಸರಕಾರಿ ನೌಕರರನ್ನು ಯಾವುದೇ ಜಾಗಕ್ಕೆ ಬೇಕಾದರೂ ವರ್ಗಾವಣೆ ಮಾಡಿಕೊಡುತ್ತೇನೆ ಎಂದು ಜನರನ್ನು ನಂಬಿಸಿ ಹಣ ಪಡೆಯುತ್ತಿದ್ದಾನೆ. ಇದರ ಬಗ್ಗೆ ಗಮನ ಹರಿಸಿ ಜನರಿಗೆ ವಂಚನೆ ಆಗುವುದನ್ನು ತಡೆಯಬೇಕು ಎಂದು ಮನವಿ ಮಾಡಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ