ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೇಪಿಸಬೇಕು ಎಂದು ಮಯೂರ ಆಂಗ್ಲ ಮಾಧ್ಯಮ ಶಾಲೆ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು.
ನಗರದ ಮಯೂರ ಶಾಲೆಯಲ್ಲಿ ಮಂಗಳವಾರ ವಾರ್ಷಿ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ.
ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರಲ್ಲೂ ಪ್ರತಿಭೆ ಹುದುಗಿದ್ದು ಅದನ್ನು ಗುರುರಿಸಿ ಪ್ರೋತ್ಸಾಹಿಸಿದಾಗ ಅವರು ಪ್ರತಿಭಾವಂತರಾಗುತ್ತಾರೆ ಎಂದರು.
ಶಾಲೆಯ ಆಡಳಿತಾಧಿಕಾರಿ ಎಸ್.ಬಿ.ಮುರಗೋಡ, ಮುಖ್ಯ ಶಿಕ್ಷಕಿ ಚೇತನಾ ಪಾಗದ ಇದ್ದರು.
Laxmi News 24×7