Breaking News

‘ಕಾಂಗ್ರೆಸ್ ಪಕ್ಷ’ ಅಧಿಕಾರಕ್ಕೆ ಬಂದರೇ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ – ಡಿಕೆ ಶಿವಕುಮಾರ್ ಘೋಷಣೆ

Spread the love

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್ ಅವರು ಘೋಷಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶವಾಗಿದೆ ಎಂದರು.

ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. 1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ ಎಂದು ಹೇಳಿದರು.

ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ. ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದು. ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ