ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು ತೆಗೆದು ಹಾಕಲಾಗಿದೆ. ಫಲಾನುಭವಿಗಳಿಗೆ ನೇರವಾಗಿ ಕೊಡುವ ಹಣದಲ್ಲಿ ಬೊರ್ ವೆಲ್ ಕೊರೆಸುವುದು ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಇನ್ನು ಕೊಳವೆ ಬಾವಿ ಸೌಲಭ್ಯಪಡೆಯಲು ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ವರ್ಷದಲ್ಲಿ 1,700 ಕೊಳವೆಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ