Breaking News
Home / ರಾಜಕೀಯ / ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ,ಯಾರಪ್ಪನ ಮನೆಯಿಂದ ತಂದು ಅಲ್ಲ: ಸಿದ್ದರಾಮಯ್ಯ

ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ,ಯಾರಪ್ಪನ ಮನೆಯಿಂದ ತಂದು ಅಲ್ಲ: ಸಿದ್ದರಾಮಯ್ಯ

Spread the love

ಬೆಳಗಾವಿ, ಜನವರಿ 11: ನಮ್ಮ ಸರ್ಕಾರ ಇದ್ದಾಗ ಬಡಜನರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆವು, ಈಗ ಅದನ್ನು 4 ಕೆ.ಜಿ ಗೆ ಇಳಿಸಿದ್ದಾರೆ. ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ, ಯಾರಪ್ಪನ ಮನೆಯಿಂದ ತಂದು ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

 

ಈ ಕುರಿತು ಬೆಳಗಾವಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆಯುವ ಪಕ್ಷ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಸಮಾಜದ ಎಲ್ಲಾ ವರ್ಗದ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಬಲೀಕರಣಕ್ಕಾಗಿ ಶ್ರಮಿಸಿದೆ.

ನಾನು ಬಸವಣ್ಣನವರ ಜಯಂತಿ ದಿನದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, ಅರ್ಧ ಗಂಟೆ ಒಳಗಾಗಿ 5 ಭರವಸೆಗಳನ್ನು ಈಡೇರಿಸಿದೆ. ನಾವು ಚುನಾವಣಾ ಪೂರ್ವದಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸುವ ಜೊತೆಗೆ 30 ಹೊಸ ಕಾರ್ಯಕ್ರಮಗಳನ್ನು ನೀಡಿದ್ದೆ.

ಬಿಜೆಪಿಯವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದವರು. ಬೆಳಗಾವಿ ಜಿಲ್ಲೆಯಲ್ಲಿ ಕೂಡ ಶಾಸಕರೊಬ್ಬರು ಖರೀದಿ ಆದರು. ಕಾಂಗ್ರೆಸ್‌ ನ 14 ಜನ ಮತ್ತು ಜೆಡಿಎಸ್‌ ನ 3 ಜನ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಜನ ಹಿತ ಮರೆತು ಲೂಟಿ ಮಾಡುವುದರಲ್ಲಿ ನಿರತರಾದದ್ದರಿಂದ ಭ್ರಷ್ಟಾಚಾರದ ಸಾಗರದಲ್ಲಿ ಮುಳುಗಿಹೋಗಿದ್ದಾರೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ