Breaking News

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

Spread the love

ಬೆಂಗಳೂರು: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (ಜ. 26) ಪೆರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ನೀಡಲಾಗಿದೆ.

ಕರ್ನಾಟಕ ಮಂಡಿಸಿದ್ದ ‘ನಾರಿ ಶಕ್ತಿ’ ವಿಷಯದ ಸ್ತಬ್ಧಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈಬಿಟ್ಟಿತ್ತು.

ಇದು ಭಾರೀ ಟೀಕೆಗೆ ಕಾರಣವಾಗಿತ್ತು.

ದೇಶದ ಇತರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರವನ್ನು ಪರಿಗಣಿಸಿಲ್ಲ ಎಂದು ಹೇಳಲಾಗಿತ್ತು.

ರಕ್ಷಣಾ ಸಚಿವಾಲಯ ಸೆ.1ರಂದು ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ತಬ್ಧಚಿತ್ರದ ವಿಷಯಗಳ ಕುರಿತು ಟಿಪ್ಪಣಿ ಕಳುಹಿಸುವಂತೆ ಕೋರಿತ್ತು. ನ. 24ರಂದು ನಡೆದ ಮೊದಲ ಆಯ್ಕೆ ಸಮಿತಿ ಸಭೆಯಲ್ಲಿ ಕರ್ನಾಟಕವೂ ಸೇರಿದಂತೆ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 23 ರಾಜ್ಯಗಳು ಭಾಗವಹಿಸಿದ್ದವು.

ಡಿ. 1ರಂದು ನಡೆದ ಎರಡನೇ ಸಭೆಯಲ್ಲಿ ಕರ್ನಾಟಕದ ‘ನಾರಿಶಕ್ತಿ’ ವಿಷಯ ಅಂತಿಮಗೊಂಡಿತ್ತು. ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು ತುಳಸಿ ಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಸ್ತಬ್ಥಚಿತ್ರಕ್ಕೆ ಆಯ್ಕೆ ಸಮಿತಿ ಸಮ್ಮತಿ ಸೂಚಿಸಿತ್ತು.

ಎರಡನೇ ಸಭೆಯಲ್ಲಿ ಒಟ್ಟು 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಭಾಗವಹಿಸಿದ್ದವು. ಮೂರನೇ ಸುತ್ತಿನ ಆಯ್ಕೆ ಸಭೆಯಲ್ಲಿ ಕರ್ನಾಟಕದ ಮಾದರಿಗೆ ಒಪ್ಪಿಗೆ ಸೂಚಿಸಿತ್ತು. ಅಲ್ಲದೆ, ಕರ್ನಾಟಕವೂ ಸೇರಿ 20 ರಾಜ್ಯಗಳ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು.

ನಾಲ್ಕನೇ ಸಭೆಯಲ್ಲಿ ಕರ್ನಾಟಕದ ಕೀ-ಮಾಡಲ್‌ ಮತ್ತು ಸಂಗೀತಕ್ಕೆ ಒಪ್ಪಿಗೆ ಸೂಚಿಸಿ, ಕೆಲವು ಮಾರ್ಪಾಟು ಮಾಡುವಂತೆ ತಿಳಿಸಿತ್ತು. ಆದರೆ, ಐದನೇ ಸುತ್ತಿನ ಸಭೆಗೆ 14 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಭಾ ಸೂಚನಾ ಪತ್ರ ಕಳುಹಿಸಲಾಗಿತ್ತು.
ಈ ಪಟ್ಟಿಯಲ್ಲಿ ಕರ್ನಾಟಕ ಹೆಸರು ಇರಲಿಲ್ಲ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ