ಹುಬ್ಬಳ್ಳಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುದರು.
ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ಸ್ವಾಮಿ ವಿವೇಕಾನಂದರು ಸಾಮಾಜಿಕವಾಗಿ ಎಲ್ಲರಿಗೂ ಪ್ರೇರಣೆ ಕೊಡುವ ಕೆಲಸ ಮಾಡಿದ್ದಾರೆ. ಕತ್ತಲೆಯಿಂದ ಬೆಳಕಿನ ಅಗಾಧ ಶಕ್ತಿ ಹೊಂದಿದ್ದವರು ವಿವೇಕಾನಂದರು ಅವರ ಜನ್ಮದಿನ ನಿಮಿತ್ತ ಹು-ಧಾ ಅವಳಿನಗರದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಚರಣೆ ಮಾಡಲಾಗುತ್ತಿದೆ. ಇದೊಂದು ಅಸ್ಮರಣೀಯ ಕಾರ್ಯಕ್ರಮ ಆಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು.