Breaking News

ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 6 ಯೂಟ್ಯೂಬ್‌ ಚಾನೆಲ್‌ಗ‌ಳಿಗೆ ನಿಷೇಧ

Spread the love

ವದೆಹಲಿ: ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರು ಯೂಟ್ಯೂಬ್‌ ಚಾನೆಲ್‌ಗ‌ಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್‌ ಇನ್ಫೋರ್ಮೇಷನ್‌ ಬ್ಯೂರೋ (ಪಿಐಬಿ) ಈ ಬಗ್ಗೆ ಪ್ರಕಟಣೆ ನೀಡಿದ್ದು, “20 ಲಕ್ಷ ಚಂದಾದಾರರನ್ನು ಹೊಂದಿರುವ 6 ಯೂಟ್ಯೂಬ್‌ ಚಾನೆಲ್‌ಗ‌ಳು 51 ಕೋಟಿ ವೀಕ್ಷಕರನ್ನು ಹೊಂದಿವೆ.

ಅವುಗಳು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ, ಚುನಾವಣಾ ವ್ಯವಸ್ಥೆಯ ಬಗ್ಗೆ, ಕೇಂದ್ರ ಸರ್ಕಾರ ಕಾರ್ಯನಿರ್ವಹಣೆಯ ಬಗ್ಗೆ ಸುಳ್ಳು ಮಾಹಿತಿ ಬಿತ್ತರಿಸುತ್ತಿದ್ದವು. ಈ ಬಗ್ಗೆ ಪಿಐಬಿಯ ಮಾಹಿತಿ ದೃಢೀಕರಣ ವಿಭಾಗ ತನಿಖೆ ನಡೆಸಿ, ಅವುಗಳು ಸುಳ್ಳು ಪ್ರಚಾರ ನಡೆಸುತ್ತಿವೆ ಎಂದು ಬಹಿರಂಗೊಳಿಸಿತ್ತು. ಕಳೆದ ತಿಂಗಳು 4 ಚಾನೆಲ್‌ಗ‌ಳ ಮೇಲೆ ನಿಷೇಧ ಹೇರಲಾಗಿತ್ತು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ