Breaking News

ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ ಪಂಚಮಸಾಲಿ ಸಮಾಜ

Spread the love

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2A ಬದಲಾಗಿ 2D ಮಿಸಲಾತಿ ನೀಡಿರುವ ಹಿನ್ನಲೆ ನಾಳೆ(ಜ.13) ಶಿಗ್ಗಾಂವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಂಚಮಸಾಲಿ ಸಮಾಜ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಶಿಗ್ಗಾಂವಿಯ ರಾಣಿ ಚೆನ್ನಮ್ಮ ಸರ್ಕಲ್​ನಿಂದ ಬೆಳಗ್ಗೆ 10 ಗಂಟೆಗೆ ಸಿಎಂ ನಿವಾಸದವರೆಗೂ ಬೃಹತ್ ಪಾದಯಾತ್ರೆ ನಡೆಯಲಿದೆ.

 

ಪಂಚಮಸಾಲಿ ಸಮಾಜದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಎಬಿ ಪಾಟೀಲ್, ವಿನಯ್ ಕುಲಕರ್ಣಿ, ವಿಜಯ್ ಕುಲಕರ್ಣಿ, ಸೇರಿದಂತೆ ಸಮಾಜದ ಮುಖಂಡರು ಸೇರಿದಂತೆ ಸಾವಿರಾರು ಜನ ಸೇರುವ ನೀರಿಕ್ಷೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ