Breaking News
Home / ರಾಜಕೀಯ / ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ

Spread the love

ಮಂಗಳೂರು: ಮಂಗಳೂರಿನ ಮೆಡಿಕಲ್‌ ಕಾಲೇಜುಗಳಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಡ್ರಗ್ಸ್‌ ದಂಧೆಯಲ್ಲಿ (Drugs Mafia) ಕೇವಲ ಮಾದಕ ಲೋಕ ಮಾತ್ರವಲ್ಲ, ಲಿವಿಂಗ್‌ ಟುಗೆದರ್‌, ಸೆಕ್ಸ್‌ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕವೂ ಬೆಳಕಿಗೆ ಬಂದಿದೆ.

 

ಮಂಗಳೂರು ಪೊಲೀಸರು ಗಾಂಜಾ ಬಲೆಯಲ್ಲಿ ಬಿದ್ದಿದ್ದ, ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವೈದ್ಯರು ಸೇರಿದಂತೆ ೧೦ ಜನರನ್ನು ಬಂಧಿಸಿದ್ದಾರೆ. ಇವರು ಕೆಎಂಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ಯೇನೆಪೋಯಾ ದೇರಳಕಟ್ಟೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರಾಗಿದ್ದಾರೆ. ಹತ್ತು ಮಂದಿಯಲ್ಲಿ ಇಬ್ಬರು ಗಾಂಜಾ ಪೆಡ್ಲರ್‌ಗಳು.

 

ಬಂಧಿತರು ಇವರು
ಬಂಧಿತ ವಿದ್ಯಾರ್ಥಿನಿಯರು: ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23).
ಬಂಧಿತ ವೈದ್ಯರು: ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28)
ವೈದ್ಯ ವಿದ್ಯಾರ್ಥಿಗಳು: ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23) ಬಂಧನ
ಬಂಧಿತ ಇತರರು: ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34), ಇಂಗ್ಲೆಂಡ್‌ ಮೂಲದ ಪೆಡ್ಲರ್‌ ನೀಲ್ ಕಿಶೋರಿಲಾಲ್ ರಾಮ್ ಜೀ.

ಬಂಧಿತ ಹತ್ತು ಮಂದಿಯನ್ನು ತಡರಾತ್ರಿವರೆಗೂ ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಈ ವೇಳೆ ಆರೋಪಿಗಳು ಇನ್ನೂ ಹಲವರ ಹೆಸರುಗಳನ್ನು ಹೇಳಿದ್ದು, ಅವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.


Spread the love

About Laxminews 24x7

Check Also

ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Spread the love ಧಾರವಾಡ : ಇದೇ ಮೊದಲ ಬಾರಿಗೆ ಕಾವಿ ಧರಿಸಿ ಧಾರವಾಡ ಲೋಕಸಭಾ ಚುನಾವಣಾ ಕಣಕ್ಕಿಳಿದು ರಂಗೇರುವಂತೆ ಮಾಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ