Breaking News

ಇದೇ 29ಕ್ಕೆ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ

Spread the love

ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇದೇ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಮೈಸೂರಿನ ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ.

2020 ರ ಸೆಪ್ಟೆಂಬರ್‌ನಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್‌ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ ಚಿತ್ರೀಕರಣವನ್ನು ಮೈಸೂರಿನಲ್ಲೇ ನಡೆಸಲು ಒತ್ತು ನೀಡಿದ್ದರು.

ಸ್ಮಾರಕ ಉದ್ಘಾಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿಷ್ಣುವರ್ಧನ್ ಅವರ ಅಳಿಯ ಹಾಗೂ ನಟ ಅನಿರುದ್ಧ್ ಅವರು, ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಬರಲು ಒಪ್ಪಿಕೊಂಡಿದ್ದಾರೆ. ಸ್ಮಾರಕ ಉದ್ಘಾಟನೆಗಾಗಿ ಬಹಳ ವರ್ಷಗಳಿಂದ ಅಭಿಮಾನಿಗಳು ಕಾದಿದ್ದರು. ಆ ದಿನ ಬಂದಿದೆ, ಎಲ್ಲ ಅಭಿಮಾನಿಗಳೂ ಹಾಜರಿರಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ