ಮುಂಬೈ: ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭೀಕರ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಿಎಂ ಶಿಂಧೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
Laxmi News 24×7