Breaking News

ಸಿದ್ದರಾಮಯ್ಯ ಸೀಟು ಖರೀದಿಸಿದ್ದು ನಾಚಿಕೆಗೇಡು: ಕೋಲಾರ ಸ್ಪರ್ಧೆಗೆ ಬಿಜೆಪಿ ಟೀಕೆ

Spread the love

ಬೆಂಗಳೂರು: ಕೋಲಾರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಟೀಕೆ ಮಾಡಿದೆ. ‘ಇಷ್ಟು ದಿನ ಹುಡುಕಾಟ ನಡೆಸಿ ಈ ಸೀಟು ಖರೀದಿಸಿರುವ ಸಂಗತಿ ನಿಜಕ್ಕೂ ನಾಚಿಕೆಗೇಡಿನದ್ದು’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

 

ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗಾಗಿ ಜೆಡಿಎಸ್‌ ಶಾಸಕ ಶ್ರೀನಿವಾಸ ಗೌಡ ಅವರು ಕ್ಷೇತ್ರ ತ್ಯಾಗ ಮಾಡುತ್ತಿರುವುದು, ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀನಿವಾಸಗೌಡ ಅವರು ತಮ್ಮ ಆಪ್ತರೊಂದಿಗೆ ಹೇಳಿಕೊಂಡಿರುವುದು ಇತ್ತೀಚೆಗೆ ಬಯಲಾಗಿತ್ತು.

ಈ ಮಾತುಕತೆಗೆ ಸಂಬಂಧಿಸಿದ ಆಡಿಯೊವೊಂದನ್ನು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಸಿದ್ದರಾಮಯ್ಯ ಅವರ ಕೋಲಾರ ಸ್ಪರ್ಧೆಯನ್ನು ಟೀಕಿಸಿದೆ.

‘ಕೊನೆಯ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿರುವ ಸಿದ್ದರಾಮಯ್ಯ ಇಷ್ಟು ದಿನ ಹುಡುಕಾಟ ನಡೆಸಿ ಸೀಟು ಖರೀದಿಸಿರುವ ಸಂಗತಿ ನಿಜಕ್ಕೂ ನಾಚಿಕೆಗೇಡು. ಆದರೆ ಶ್ರೀನಿವಾಸ ಗೌಡರ ಜತೆ 17 ಕೋಟಿ ರೂ.ಗೆ ಮಾಡಿಕೊಂಡಿರುವ ಡೀಲ್‌ ಪ್ರಜಾಪ್ರಭುತ್ವದ ಪಾಲಿನ ದುರಂತ. ಕಾಂಗ್ರೆಸ್‌ ಅಧ್ಯಕ್ಷರು (ಡಿ.ಕೆ ಶಿವಕುಮಾರ್‌) ಟಿಕೆಟ್‌ ಮಾರಾಟಕ್ಕಿಟ್ಟರೆ, ವಿರೋಧ ಪಕ್ಷದ ನಾಯಕರು ಸೀಟನ್ನೇ ಖರೀದಿ ಮಾಡುವವರು. ಚುನಾವಣಾ ರಾಜಕಾರಣದಲ್ಲಿ ಹಿಂದೆಂದೂ ಕಂಡು ಕೇಳರಿಯದ ಅಕ್ರಮ-ಸಕ್ರಮ ಯೋಜನೆಗಳನ್ನು ಕಾಂಗ್ರೆಸ್‌ ಚಾಲನೆಗೆ ತಂದಿದೆ’ ಎಂದು ಬಿಜೆಪಿ ಆರೋಪಿಸಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ