Breaking News

ಸ್ಯಾಂಟ್ರೋ ರವಿ ಬಂಧನ; ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್

Spread the love

ಶ್ರೀರಂಗಪಟ್ಟಣ : ಸ್ಯಾಂಟ್ರೋ ರವಿ ಬಂಧನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಶ್ರೀರಂಗಪಟ್ಟಣದ ಗಂಜಾಂ ಗ್ರಾಮದಲ್ಲಿರುವ ಶಕ್ತಿ ದೇವತೆ ನಿಮಿಷಾಂಭ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ.

ಕಳೆದ 4 ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಆಗಮಿಸಿ ಹರಕೆ ಹೊತ್ತುಕೊಂಡಿದ್ದ ಅಲೋಕ್ ಕುಮಾರ್ ಅವರು ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸ್ಯಾಂಟ್ರೋ ರವಿ ಬಂಧನವಾದರೆ ಮತ್ತೆ ದೇಗುಲಕ್ಕೆ ಆಗಮಿಸುವುದಾಗಿ ಹರಕೆ ಹೊತ್ತಿದ್ದರು. ಹರಕೆ ಹೊತ್ತುಕೊಂಡ 26 ಗಂಟೆಗಳಲ್ಲೆ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿತ್ತು.

ದೇವಸ್ಥಾನಕ್ಕೆ ಬಂದು ಹರಕೆ ತೀರಿಸಿದ ಬಳಿಕ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಕೇಸ್ ಆಗಿತ್ತು.ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ.ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದರೆ 5 ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಕಿನಂದು ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ.ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ.ದೇವಿ ಮೇಲೆ ನನಗೂ ಬಹಳ‌ ನಂಬಿಕೆ ಇದೆ ಎಂದರು.

ಆತನಿಂದಾಗಿ ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಆತ ಈಗ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ ನಂತರ ಆತ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದರು ಎಂಬ ಬಗೆಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದರೂ ಸಹಾಯ ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.


Spread the love

About Laxminews 24x7

Check Also

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ರಾಜ್ಯ ಪೊಲೀಸರ ಎಚ್ಚರಿಕೆ

Spread the loveಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ