Breaking News

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ: ಹೆಚ್‍ಡಿ.ರೇವಣ್ಣ ಆಕ್ರೋಶ

Spread the love

ಹಾಸನ: ಹಾಸನ ನಗರಸಭೆ ಅಧ್ಯಕ್ಷಗಾದಿಯನ್ನು ಎಸ್‍ಟಿ ಅಭ್ಯರ್ಥಿಗೆ ಮೀಸಲಿರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಾಸನದಲ್ಲಿ ಶಾಸಕ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.

ಹಾಸನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಹುಮತವಿದ್ದರೂ ಜೆಡಿಎಸ್ ಪಕ್ಷ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದೆ. ಈ ಬಗ್ಗೆ ಹಾಸನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ ಎಂದರು. 

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ ಇರಬಹುದು. ಜಿಲ್ಲೆಯಲ್ಲಿ ಹಿಂದೆ ಕಾಂಗ್ರೆಸ್ ಮಾಡಿದ್ದನ್ನು ಈಗ ಬಿಜೆಪಿಯವರು ಮಾಡಿದ್ದಾರೆ. ಹರಿಹರ ನಗರಸಭೆಗೆ ಮೀಸಲಾಗಿದ್ದ ಎಸ್‍ಟಿ ಮೀಸಲಾತಿಯನ್ನು ಹಾಸನ ನಗರಸಭೆಗೆ ಹಾಕಿದ್ದಾರೆ. ರಾಜ್ಯದಲ್ಲಿ ಎಸ್‍ಟಿಗೆ ಮೀಸಲು ಇರುವುದು ಎರಡೇ ಸ್ಥಾನ. ಅದು ಕೊಪ್ಪಳ ಮತ್ತು ಹರಿಹರಕ್ಕೆ ಇದನ್ನು ಅಡ್ವೋಕೇಟ್ ಜನರಲ್ ಹೈಕೋರ್ಟಿಗೂ ನೀಡಿದ್ದರು. ಆದರೀಗ ರಾತ್ರೋರಾತ್ರಿ ಬದಲು ಮಾಡಿದ್ದಾರೆ ಎಂದು ಆರೋಪ ಮಾಡಿದರು.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ