ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ ಸತೀಶ್ ಕೂಡ ಜೈಲು ಪಾಲಾಗಿದ್ದಾರೆ.
ಎಫ್ಐಆರ್ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿ ಗುಜರಾತ್ನ ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ 11 ದಿನದ ಬಳಿಕ ಅಂದರೆ ನಿನ್ನೆ(ಜ.13) ಕರ್ನಾಟಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದಾರೆ.
ಪ್ರಾಥಮಿಕ ವಿಚಾರಣೆ ನಡೆಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಗುರುರಾಜ್ ಅವರು ಸ್ಯಾಂಟ್ರೋ ರವಿ ಸೇರಿ ಮೂವರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
Laxmi News 24×7