Breaking News

ಒಂದೇ ಬಾರಿಗೆ 4 ಕರುಗಳಿಗೆ ಜನ್ಮನೀಡಿ ಅಚ್ಚರಿ ಮೂಡಿಸಿದ ಹಸು!

Spread the love

ಬಾಗಲಕೋಟೆ: ಪ್ರಪಂಚದಲ್ಲಿ ಪ್ರತಿದಿನವೂ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಲ ವಿಷಯಗಳನ್ನು ನಂಬಲು ಸಹ ಸಾಧ್ಯವಾಗುವುದಿಲ್ಲ. 2 ಮುಖ, 5 ಕಾಲಿನ ಕರುಗಳು ಮತ್ತು ಪ್ರಾಣಿಗಳನ್ನು ನೀವು ನೋಡೇ ಇರುತ್ತೀರಿ. ಒಂದೇ ಬಾರಿಗೆ 2 ಕರುಗಳಿಗೆ ಜನ್ಮನೀಡಿದ ಹಸುಗಳನ್ನೂ ನೀವು ಕಂಡಿರುತ್ತೀರಿ.

ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿದ್ದು, ಅಚ್ಚರಿ ಮೂಡಿಸಿದೆ.

ಹೌದು, ಅಚ್ಚರಿಯಾದರೂ ಇದು ನಿಜ.ಬಾಗಲಕೋಟೆಜಿಲ್ಲೆಯ ಆಸಂಗಿ ಗ್ರಾಮದಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿದೆ. ಈ ಘಟನೆ ಸ್ಥಳೀಯರಲ್ಲಿ ದೊಡ್ಡ ಅಚ್ಚರಿಯನ್ನುಂಟುಮಾಡಿದೆ. ಜನಿಸಿದ 4 ಕರುಗಳು ಸಹ ಆರೋಗ್ಯವಾಗಿದ್ದು, ಹಸುವಿನ ಮಾಲೀಕರ ಮೊಗದಲ್ಲಿ ಸಂತಸ ಮೂಡಿದೆ.ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ರವೀಂದ್ರ ಬಾಳಪ್ಪ ಶಿರಹಟ್ಟಿ ಎಂಬುವರಿಗೆ ಸೇರಿದ ಈ ಆಕಳು 4 ಕರುಗಳಿಗೆ ಜನ್ಮ ನೀಡಿದೆ. ಇದರಲ್ಲಿ 2 ಹೆಣ್ಣು ಕರುಗಳಾದರೆ, 2 ಹೋರಿ ಕರುಗಳಿವೆ. ಹೈನುಗಾರಿಕೆ ಮಾಡುತ್ತಿದ್ದ ರವೀಂದ್ರರ ಹಸು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿರುವುದು ಮನೆಮಂದಿಯ ಖುಷಿಯನ್ನು ಹೆಚ್ಚಿಸಿದೆ. ಈ ಘಟನೆಯಿಂದ ನಮ್ಮ ಕುಟುಂಬಕ್ಕೆ ಅಚ್ಚರಿಯ ಜೊತೆಗೆ ಬಹಳಷ್ಟು ಸಂತೋಷವಾಗಿದೆ ಎಂದು ರೈತ ರವೀಂದ್ರ ಅವರು ಖುಷಿ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ನಾಳೆಯಿಂದ ವಾರ್ಷಿಕ ವಿಶೇಷ ಶಿಬಿರ

Spread the loveನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ದತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ