Breaking News

IAS ಪಾಸ್​ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್​

Spread the love

ವದೆಹಲಿ: ಐಎಎಸ್​ ಅಧಿಕಾರಿಯಾಗಲು ದಿನಕ್ಕೆ ಎಷ್ಟು ಗಂಟೆ ಅಧ್ಯಯನ ಮಾಡಬೇಕು ಎಂ ವಿದ್ಯಾರ್ಥಿನಿಯ ಪ್ರಶ್ನೆಗೆ ಸೆಲೆಬ್ರಿಟಿ ಐಎಎಸ್​ ಅಧಿಕಾರಿ ಟೀನಾ ಡಾಬಿ ಅವರು ನೀಡಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

 

ಟೀನಾ ಡಾಬಿ ಅವರು ಪ್ರಸ್ತುತ ರಾಜಸ್ಥಾನದ ಜೈಸಲ್ಮೇರ್​ನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಯೋನಿರ್​ ಜೈಸನ್ ಶಕ್ತಿ (ಮಹಿಳೆಯರು ಮೊದಲು) ಕಾರ್ಯಕ್ರಮದ ಭಾಗವಾಗಿ ಜೈಸಲ್ಮೇರ್​ನ ಇಂಧಿರಾ ಗಾಂಧಿ ಇಂದೋರ್​ ಸ್ಟೇಡಿಯಂನಲ್ಲಿ ವಿದ್ಯಾರ್ಥಿನಿಯರಿಗೆ ವೃತ್ತಿ ಸಮಾಲೋಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಟೀನಾ ಡಾಬಿ ಅವರು ಭಾಗವಹಿಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.

ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಟೀನಾ ಡಾಬಿ, ಪ್ರತಿ ಯಶಸ್ಸಿಗೆ ಹೋರಾಟ ಮತ್ತು ಸಮರ್ಪಣಾ ಮನೋಭಾವ ಅತ್ಯಗತ್ಯ ಎಂದರು. ಯಾವುದೇ ವಿದ್ಯಾರ್ಥಿಗಳು ಹೋರಾಟಕ್ಕೆ ಹೆದರದೆ ಶೇ.100 ರಷ್ಟು ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು, ನೀವು ಈ ದೇಶದ ಯುವ ಐಕಾನ್, ನಿಮ್ಮ ಪ್ರೇರಣೆ ಏನು? ಎಂದು ಪ್ರಶ್ನಿಸಿದಳು. ಇದಕ್ಕೆ ಉತ್ತರಿಸಿದ ಟೀನಾ ಡಾಬಿ, ಸಾರ್ವಜನಿಕರಿಂದ ಪಡೆಯುವ ಪ್ರೀತಿಯು ಪೂರ್ಣ ಸಮರ್ಪಣೆಯೊಂದಿಗೆ ಕೆಲಸ ಮಾಡಲು ನನಗೆ ಪ್ರೇರೇಪಿಸುತ್ತದೆ ಎಂದು ಉತ್ತರಿಸಿದರು.

12ನೇ ತರಗತಿಗೆ ತಯಾರಿ ನಡೆಸುವಾಗ ಐಎಎಸ್ ತಯಾರಿಯನ್ನು ಮಾಡಬಹುದೇ? IAS ಆಗಲು ಎಷ್ಟು ಗಂಟೆಗಳ ಅಧ್ಯಯನದ ಅಗತ್ಯವಿದೆ? ಎಂದು ಇತರೆ ವಿದ್ಯಾರ್ಥಿನಿಯರು ಪ್ರಶ್ನಿಸಿದರು.

ವಿದ್ಯಾರ್ಥಿನಿಯರ ಪ್ರಶ್ನೆಗೆ ಇಂದಿನ ಯುಗ ಹೇಗೆ ಸ್ಪರ್ಧಾತ್ಮಕ ಯುಗವಾಗಿದೆ ಎಂಬುದನ್ನು ಪ್ರಸ್ತಾಪಿಸಿದ ಟೀನಾ ಡಾಬಿ, ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ವೃತ್ತಿಗೆ ಒಂದಕ್ಕಿಂತ ಹೆಚ್ಚು ಆಯ್ಕೆಗಳನ್ನು ಇಟ್ಟುಕೊಂಡು ಶ್ರಮಿಸಬೇಕು. ಪ್ರತಿಯೊಂದು ವಿಷಯವೂ ಉತ್ತಮ ವೃತ್ತಿ ಆಯ್ಕೆಯಾಗಿದೆ ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ವೃತ್ತಿಜೀವನದ ಬಗ್ಗೆ ಗಂಭೀರವಾಗಿರಬೇಕು. ಭವಿಷ್ಯ ರೂಪಿಸಿಕೊಳ್ಳಲು ಬಯಸುವ ಯಾವುದೇ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ