Breaking News

ಗಂಗಾಮತಸ್ಥರಿಗೆ ST ಮೀಸಲಾತಿ ಸೌಲಭ್ಯ : ಸಿಎಂ

Spread the love

ಹಾವೇರಿ: ‘ಅಂಬಿಗರ ಸಮಾಜಕ್ಕೆ (ಗಂಗಾಮತಸ್ಥರು) ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸಮಾಜದ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು.

 

ತಾಲ್ಲೂಕಿನ ನರಸೀಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಪರಿಶಿಷ್ಟ ಪಂಗಡದ ಮೀಸಲಾತಿ ಅಡಿ ಪರಿಗಣಿಸಲು ಕೇಂದ್ರ ಸಚಿವ ಅರ್ಜುನ್‌ ಮುಂಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಲಾಗಿದೆ. ಕೇಂದ್ರದ ಕಾನೂನು ಸಚಿವಾಲಯವು ಕೆಲವು ಸ್ಪಷ್ಟೀಕರಣ ಕೇಳಿದೆ. ಅದನ್ನು ರಾಜ್ಯದಿಂದ ಒದಗಿಸಲಾಗಿದೆ. ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ’ ಎಂದು ತಿಳಿಸಿದರು.

₹5 ಕೋಟಿ ಅನುದಾನ: ‘ಅಂಬಿಗರ ಸಮಾಜದ ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಪ್ರಗತಿಗಾಗಿ ಅಂಬಿಗರ ಚೌಡಯ್ಯನವರ ಮಠಕ್ಕೆ ₹10 ಕೋಟಿ ಅನುದಾನ ಘೋಷಿಸಿದ್ದು, ಸದ್ಯ ₹5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ