Breaking News

ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ: ಬಸನಗೌಡ ಪಾಟೀಲ ಯತ್ನಾಳ

Spread the love

ವಿಜಯಪುರ: ‘ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದಂತೆ ವರಿಷ್ಠರು ಭಾನುವಾರ ಬೆಳಿಗ್ಗೆ ಫೋನ್‌ ಮಾಡಿ ತಿಳಿಸಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಷಯವಾಗಿ ಚರ್ಚಿಸುವ ಸಂಬಂಧ ದೆಹಲಿಗೆ ಬರುವಂತೆಯೂ ಪಕ್ಷದ ವರಿಷ್ಠರು ನನಗೆ ಆಹ್ವಾನಿಸಿದ್ದಾರೆ.

ಮೀಸಲಾತಿ ಕುರಿತಂತೆ ಕೇಂದ್ರದಿಂದ ಸಿಹಿ ಸುದ್ದಿ ಸಿಗುವ ಆಶಾಭಾವ ಇದೆ’ ಎಂದು ಹೇಳಿದರು.

‘ಪಕ್ಷದಲ್ಲಿ ಇರಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೊರಹೋಗಲಿ’ ಎಂಬ ಸಚಿವ ಮುರುಗೇಶ ನಿರಾಣಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ, ‘ಯಾರಪ್ಪಂದ್ರೀ ಪಕ್ಷ..? ಎಂದು ಪ್ರಶ್ನಿಸಿದರು. ನನ್ನನ್ನು ಪಕ್ಷದಿಂದ ಹೊರ ಹಾಕುವ ತಾಕತ್ತು ಯಾರಿಗೂ ಇಲ್ಲ’ ಎಂದು ಅವರು ಸವಾಲೆಸೆದರು.

ಸಿಬಿಐ ತನಿಖೆಗೆ ಒಪ್ಪಿಸಲಿ: ‘ಕಾರು ಚಾಲಕನ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ಅವರು ತಿಳಿಸಿದರು.

‘ಮುರುಗೇಶ ನಿರಾಣಿ ಅವರು ಯಾವುದೋ ಚಾಲಕನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಸತ್ಯಾಸತ್ಯತೆ ತಿಳಿಯಲು 24 ಗಂಟೆಗಳಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿ. ಇಲ್ಲವೇ, ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.


Spread the love

About Laxminews 24x7

Check Also

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ

Spread the loveರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ