ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ, ರಾಜಧಾನಿಯಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಶನಿವಾರದಿಂದ ಮತ್ತೊಂದು ಸುತ್ತಿನ ಹೋರಾಟ ಆರಂಭವಾಗಿದೆ.
ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದ ಪ್ರತಿಭಟನಕಾರರು ಅಲ್ಲಿಂದ ಶನಿವಾರ ಬೆಂಗಳೂರಿಗೆ ಬಂದರು.
ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
‘ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ಪಂಚಮಸಾಲಿ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿದ್ದೇವೆ. ಅಂತಿಮ ಆದೇಶ ಬರುವ ತನಕ ಸ್ವಾತಂತ್ರ್ಯ ಉದ್ಯಾನ ಬಿಟ್ಟು ಎಲ್ಲಿಗೂ ಕದಲುವುದಿಲ್ಲ’ ಎಂದು ಸ್ವಾಮೀಜಿ ಘೋಷಿಸಿದರು.