Breaking News

ಕೇಂದ್ರ ಸರ್ಕಾರದ ಅಂಗಳಕ್ಕೆ ಪಂಚಮಸಾಲಿ ಮೀಸಲಾತಿ ವಿಚಾರ: ಜೆ.ಪಿ.ನಡ್ಡಾ ಜತೆ ಚರ್ಚೆ ಸಾಧ್ಯತೆ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಸೃಷ್ಟಿಸಿರುವ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ಇದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.19ರಂದು ವಿಜಯಪುರಕ್ಕೆ ಆಗಮಿಸಲಿದ್ದು, ಈ ವೇಳೆ ಮೀಸಲಾತಿ ವಿಚಾರದ ಬಗ್ಗೆ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಸೇರಿ ಸಮುದಾಯದ ಪ್ರಮುಖ ಮುಖಂಡರ ಜತೆ ಚರ್ಚಿಸುವ ಸಾಧ್ಯತೆ ಇದೆ.

ಇಲ್ಲವಾದರೆ, ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಸಮುದಾಯದ ಪ್ರಮುಖ ಮುಖಂಡರನ್ನು ಕೇಂದ್ರ ನಾಯಕರು ಕರೆಸಿಕೊಂಡು ಸಮಾಲೋಚಿಸಲಿದ್ದಾರೆ.

ಪ್ರವರ್ಗ ‘3ಬಿ’ನಲ್ಲಿದ್ದ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಡಿ’ಗೆ ಸೇರಿಸಲಾಗಿತ್ತು. ಆದರೆ, ಹೈಕೋರ್ಟ್ ಇದನ್ನು ರದ್ದುಪಡಿಸಿತ್ತು. ಪೂರ್ಣ ಪ್ರಮಾಣದಲ್ಲಿ ವರದಿ ಬಂದ ಬಳಿಕ ಮೀಸಲಾತಿ ಘೋಷಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಚುನಾವಣಾ ನೀತಿಸಂಹಿತೆ ಜಾರಿಗೆ ಮುನ್ನ ಸಂಪೂರ್ಣ ವರದಿ ಪಡೆದು ಅದಷ್ಟು ಬೇಗ ಮೀಸಲಾತಿ ಘೋಷಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶ್ರೀಗಳು ಮತ್ತೆ ಧರಣಿ ಕುಳಿತಿರುವ ವಿಚಾರವೂ ಹೈಕಮಾಂಡ್ ಗಮನಕ್ಕೆ ಬಂದಿದೆ.

ಹಾಗಾಗಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೇರೆ ಬೇರೆ ಸಮುದಾಯಗಳ ಮೀಸಲಾತಿಯ ಜಟಿಲ ಸಮಸ್ಯೆ ಶಮನಗೊಳಿಸಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಇದರ ನಡುವೆ ಪಂಚಮಸಾಲಿ ಸಮುದಾಯದ ಮೀಸಲಾತಿಯ ಸಾಧಕ-ಬಾಧಕ ಬಗ್ಗೆ ಸಂಘ ಪರಿವಾರದ ಪ್ರಮುಖ ಮುಖಂಡರೊಬ್ಬರು, ಸೋಮವಾರ ಶ್ರೀಗಳ ಜತೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ