Breaking News
Home / Uncategorized / ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

Spread the love

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು, ಕಳಸ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಭಾರೀ ಮಳೆಯಾಗಿದೆ. ಕಳಸ, ಹೊರನಾಡು ಸೇರಿದಂತೆ ಹಲವೆಡೆ ಸತತ ಅರ್ಧ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ.ಸಕ್ಕರೆನಾಡು ಮಂಡ್ಯದಲ್ಲಿ ಸುರಿದ ಮಳೆ ಭಾರೀ ಅವಾಂತರ ಸೃಷ್ಟಿಸಿದೆ.

ಮಂಡ್ಯದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ ಸ್ಥಳೀಯ ನಿವಾಸಿಗಳು ಪರದಾಡಿದ್ರು. ಮನೆಯಲ್ಲಿದ್ದ ದವಸ-ಧಾನ್ಯಗಳು ಸೇರಿದಂತೆ ವಸ್ತುಗಳು ನೀರುಪಾಲಾಗಿವೆ. ಮದ್ದೂರು ತಾಲೂಕಿನಲ್ಲಿ ಭಾರೀ ಮಳೆಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ವು. ವಿದ್ಯುತ್ ಸಂಪರ್ಕ ಕಡಿತಗೊಂಡು ಜನ ಕತ್ತಲೆಯಲ್ಲಿ ಕಳೆದ್ರು.

ಇತ್ತ ಹೈದಾರಾಬಾದ್‍ನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳೆಲ್ಲ ಕೆರೆಯಂತಾಗಿ ವಾಹನ ಸವಾರರು ರಸ್ತೆಯಲ್ಲೇ ಪರದಾಡುವಂತಾಯ್ತು. ಸತತ 5 ಗಂಟೆಗಳ ಕಾಲ ಸುರಿದ ಮಳೆಯಿಂದ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಇನ್ನೂ ರಾಜಭವನದ ರಸ್ತೆಯಲ್ಲಿ ವಾಹನ ಚಕ್ರಗಳು ಮುಳುಗುವಷ್ಟರ ಮಟ್ಟಿಗೆ ನೀರು ರಸ್ತೆಯಲ್ಲಿ ನಿಂತು ದೊಡ್ಡ ಅವಾಂತರವೇ ಸೃಷ್ಟಿಯಾಗಿತ್ತು.


Spread the love

About Laxminews 24x7

Check Also

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

Spread the love ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ