ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ ನಡೆಯುತ್ತಿದೆ.
ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ನಾಯಕರು ದಿಲ್ಲಿಗೆ ತೆರಳಲಿದ್ದಾರೆ. ಮಹಿಳೆಯರಿಗಾಗಿ ಸೋಮವಾರ ಕಾಂಗ್ರೆಸ್ ‘ನಾ ನಾಯಕಿ’ ಸಮಾವೇಶ ಏರ್ಪಡಿಸಿದ್ದು, ಪ್ರಿಯಾಂಕಾ ವಾದ್ರಾ ಭಾಗವಹಿಸಲಿದ್ದಾರೆ. ‘ರೈತ ಚೈತನ್ಯ’ ಕಾರ್ಯಕ್ರಮ ಹಮ್ಮಿಕೊಂಡಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ‘ರೈತ ಸಂಕ್ರಾಂತಿ’ ಎಂಬ ರೈತರ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಚುನಾವಣೆ ಬಗ್ಗೆ ಚರ್ಚೆ
ಎಪ್ರಿಲ್-ಮೇ ತಿಂಗಳಲ್ಲಿ ನಡೆಯಬಹುದಾದ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತಯಾರಿ ಆರಂಭಿಸಿದೆ. ಈ ಮಧ್ಯೆ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ವಿಧಾನಸಭೆ ಹೊಸ್ತಿಲಲ್ಲೇ ಈ ಸಭೆ ಮಹತ್ವ ಪಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ,ಜಗದೀಶ್ ಶೆಟ್ಟರ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಜ್ಯ ಸಂಘಟನ ಕಾರ್ಯದರ್ಶಿ ರಾಜೇಶ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
 Laxmi News 24×7
Laxmi News 24×7
				 
		 
						
					 
						
					 
						
					