Home / ಜಿಲ್ಲೆ / ಬೆಳಗಾವಿ / ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ: ಎಂಇಎಸ್ ನಾಡವಿರೋಧಿ ಘೋಷಣೆ

ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ: ಎಂಇಎಸ್ ನಾಡವಿರೋಧಿ ಘೋಷಣೆ

Spread the love

ಬೆಳಗಾವಿ: ಇಲ್ಲಿನ ಹುತಾತ್ಮ ಚೌಕ್‌ನಲ್ಲಿ ಮಂಗಳವಾರ ನಡೆದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರು ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಿದರು.

‘ರಾಜ್ಯದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು’ ಎಂದು ಒತ್ತಾಯಿಸಿದ ಕಾರ್ಯಕರ್ತರು, ‘ಬೆಳಗಾವಿ, ಖಾನಾಪುರ, ನಿಪ್ಪಾಣಿ, ಬೀದರ್‌, ಭಾಲ್ಕಿ, ಕಾರವಾರ ಸಹ ಸಂಯುಕ್ತ ಮಹಾರಾಷ್ಟ್ರ ಝಾಲಾಚ್‌ ಪಾಹಿಜೆ’ ಎಂದು ನಾಡವಿರೋಧಿ ಘೋಷಣೆ ಕೂಗಿದರು.

 

‘ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಮತ್ತು ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಿಸದಂತೆ ಜಿಲ್ಲಾಡಳಿತ ಸೋಮವಾರ ತಡರಾತ್ರಿ ಆದೇಶ ಹೊರಡಿಸಿರುವುದು ಸರಿಯಲ್ಲ’ ಎಂದು ದೂರಿದರು.

ಎಂಇಎಸ್‌ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್‌, ‘ಇಲ್ಲಿನ ರಾಜಕಾರಣಿಗಳು ಕರ್ನಾಟಕದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ ಎನ್ನುತ್ತಾರೆ. ಆದರೆ, ಬೇರೆ ಬೇರೆ ಪ್ರಾಂತ್ಯಗಳಲ್ಲಿದ್ದ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ತಂದಿರುವುದು ಅವರಿಗೆ ತಿಳಿದಿಲ್ಲ. ಹಾಗಾಗಿ ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎಂದರು.

ಎಂಇಎಸ್‌ ಅಧ್ಯಕ್ಷ ದೀಪಕ ದಳವಿ, ‘ರಾಜ್ಯ ಸರ್ಕಾರ ನಮ್ಮೊಂದಿಗೆ ನಡೆದುಕೊಳ್ಳುವ ರೀತಿ ಗಮನಿಸಿದರೆ, ನಾವೂ ಹೊರಗಿನವರು ಎಂಬ ಭಾವನೆ ಮೂಡುತ್ತದೆ. ಹೀಗಾಗಿ ಮಹಾರಾಷ್ಟ್ರದ ಭಾಗವಾಗಲು ಬಯಸುತ್ತೇವೆ. ಹೊಸ ತಲೆಮಾರಿನವರೂ ಎಂಇಎಸ್ ಚಳವಳಿಯಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದು ತಿಳಿಸಿದರು.

ಮಾಜಿ ಮೇಯರ್‌ ಸರಿತಾ ಪಾಟೀಲ, ಕಿರಣ ಸಾಯನಾಕ್‌, ಮಾಜಿ ಉಪಮೇಯರ್‌ ಧನರಾಜ ಗವಳಿ, ರೇಣು ಕಿಲ್ಲೇಕರ್‌, ಮಹಾನಗರ ಪಾಲಿಕೆ ಸದಸ್ಯರಾದ ರವಿ ಸಾಳುಂಕೆ, ಶಿವಾಜಿ ಮಂಡೋಳ್ಕರ್‌, ವೈಶಾಲಿ ಭಾತಖಾಂಡೆ, ಎಂಇಎಸ್‌ ಮುಖಂಡರಾದ ರಂಜೀತ್‌ ಚವ್ಹಾಣ-ಪಾಟೀಲ, ವಿಕಾಸ ಕಲಘಟಗಿ, ಮದನ್‌ ಭಾಮನೆ ಇತರರಿದ್ದರು.


Spread the love

About Laxminews 24x7

Check Also

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Spread the love ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ