Breaking News

ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ: ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಸಾರಥ್ಯ

Spread the love

ವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಅವರನ್ನ ಮುಂದುರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಂಗಳವಾರ ಘೋಷಿಸಿದರು.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಜೂನ್ ವರೆಗೆ ವಿಸ್ತರಿಸಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯಲಿದ್ದಾರೆ. ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಬಹುಮತ ಸಿಕ್ಕಿತು. ಮಹಾರಾಷ್ಟ್ರದಲ್ಲೂ ಎನ್​ಡಿಎ ಬಹುಮತ ಗಳಿಸಿತು, ಉತ್ತರ ಪ್ರದೇಶದಲ್ಲೂ ಗೆಲುವು ನಮ್ಮದಾಯಿತು. ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಾಯಿತು. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯನ್ನು ನರೇಂದ್ರ ಮೋದಿಜಿ ಅವರ ನಾಯಕತ್ವದಲ್ಲಿ ಮತ್ತು ನಡ್ಡಾಜಿ ಜೊತೆಯಲ್ಲಿ ಎದುರಿಸುತ್ತೇವೆ. 2019ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಅಮಿತ್​ ಶಾ ವಿಶ್ವಾಸ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ