Breaking News

1 ಕಿ.ಮೀ ದೂರ ವ್ಯಕ್ತಿಯನ್ನು ಎಳೆದೊಯ್ದ ಬೈಕ್ ಸವಾರ; ಬೆಂಗಳೂರಿನಲ್ಲೊಂದು ಆಘಾತಕಾರಿ ಘಟನೆ

Spread the love

ಬೆಂಗಳೂರು: ದೆಹಲಿಯಲ್ಲಿ ಮಹಿಳೆಯನ್ನು ಒಂದು ಗಂಟೆಗೂ ಹೆಚ್ಚು ಕಾಲ ಎಳೆದೊಯ್ದು, ಆಕೆ ಸಾವಿಗೀಡಾದ ಆಘಾತಕಾರಿ ಪ್ರಕರಣವೊಂದು ಮಾಸುವ ಮುನ್ನವೇ ಇದೀಗ ರಾಜ್ಯ ರಾಜಧಾನಿಯಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ.

ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಟಾಟಾ ಸುಮೋ ಕಾರಿಗೆ ಡಿಕ್ಕಿ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ.

ಕಾರಿನ ‌ಡ್ರೈವರ್ ಪ್ರಶ್ನಿಸುತ್ತಿದ್ದಂತೆ ಸವಾರ ಸ್ಕೂಟರ್ ಹತ್ತಿ ಎಸ್ಕೇಪ್ ಆಗಲು ಮುಂದಾಗಿದ್ದಾನೆ. ಈ ವೇಳೆ ಬೈಕ್ ಸವಾರನನ್ನು ಹಿಡಿಯಲು ಟಾಟಾ ಸುಮೋ ಚಾಲಕ ಮುಂದಾಗಿದ್ದಾನೆ. ಇದಕ್ಕಾಗಿ ಸ್ಕೂಟರ್​ನನ್ನು ಹಿಂದಿನಿಂದ ಹಿಡಿದುಕೊಂಡಿದ್ದಾನೆ. ಆದರೆ ಸ್ಕೂಟರ್ ಸವಾರ ಮಾತ್ರ ಸ್ಥಳದಿಂದ ಪರಾರಿಯಾಗುವ ಯತ್ನದಲ್ಲಿ ತನ್ನ ಸ್ಕೂಟರ್​​ನಲ್ಲೆ ಚಾಲಕನನ್ನು ಎಳೆದೊಯ್ದಿದ್ದಾನೆ. ಸಾಹಿಲ್ ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ. ಮುತ್ತಪ್ಪ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ಈ ಆಘಾತಕಾರಿ ಘಟನೆ ಹೊಸಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದವರೆಗೆ ಸ್ಕೂಟರ್ ಸವಾರ ಚಾಲಕನನ್ನು ಎಳೆದೊಯ್ದಿದ್ದಾನೆ. ವಯಸ್ಸಾದ ಚಾಲಕನನ್ನು ಸ್ಕೂಟರ್​​​ನಲ್ಲಿ ಎಳೆದೊಯ್ಯುತ್ತಿರುವ ದೃಶ್ಯವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ವಿಡಿಯೋ ಮಾಡಿದ್ದಾರೆ. ರಾಂಗ್​ ಸೈಡ್​​ನಲ್ಲಿ ಬಂದ ಸ್ಕೂಟರ್ ಚಾಲಕ ಟಾಟಾ ಸುಮೋ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಬಡಾವಣೆಗಳನ್ನು ರೂಪಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆ

Spread the loveಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ