Breaking News

ಯಾದಗಿರಿ, ಕಲಬುರಗಿಗೆ ಇಂದು ಪ್ರಧಾನಿ ಮೋದಿ ಭೇಟಿ

Spread the love

ಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು.

ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವರು ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು. 51,000 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯಪಾಲ ಥಾವರಚಂದ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಮುರುಗೇಶ ನಿರಾಣಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ‌.ರಾಜೀವ ಮತ್ತು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು.


Spread the love

About Laxminews 24x7

Check Also

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ; ಬಿಗಿ ಪೊಲೀಸ್ ಬಂದೋಬಸ್ತ್

Spread the loveಒಂದೆಡೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್‌ನಿಂದ ಕರಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ