Breaking News

ಅನಿರ್ದಿಷ್ಟಾವಧಿ ಧರಣಿ: ಶಿಕ್ಷಕರ ಸ್ಥಾನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪಟ್ಟು

Spread the love

ಬೆಂಗಳೂರು: ಸೇವೆ ಕಾಯಂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಬುಧವಾರದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

 

ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು. ಪ್ರತಿ ತಿಂಗಳು ₹ 31 ಸಾವಿರ ವೇತನ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ರಾಜ್ಯದಲ್ಲಿ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಆರೋಗ್ಯ ವಿಮೆ ಜಾರಿಗೆ ತರಬೇಕು. ತೀವ್ರತರಹದ ಕಾಯಿಲೆಗಳಿಂದ ಬಳಲುತ್ತಿರುವ ಕಾರ್ಯಕರ್ತೆಯರಿಗೆ ಸಂಬಳ ಸಹಿತ ರಜೆ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿರುವ 1.32 ಲಕ್ಷ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಾಮಾಜಿಕ ಭದ್ರತೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹಿಳಾ ಸಬಲೀಕರಣದ ಭರವಸೆಗಳು, ಯೋಜನೆಯ ರೂಪದಲ್ಲಿ ಜಾರಿಗೊಳ್ಳುತ್ತಿಲ್ಲ’ ಎಂದು ದೂರಿದರು.

‘ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಆರೋಗ್ಯ ತಪಾಸಣೆ, ವಿಶೇಷ ಮಕ್ಕಳಿಗೆ ಪೌಷ್ಟಿಕ ಆಹಾರ ಸೌಲಭ್ಯ, ‘ಸ್ನೇಹಾ ಆಯಪ್‌’ ಮೂಲಕ ಮಕ್ಕಳ ತೂಕ ಮಾಡಿ, ಪ್ರತಿ ತಿಂಗಳು ಆಯಪ್‌ನಲ್ಲಿ ಮಾಹಿತಿ ಭರ್ತಿಗೊಳಿಸುವುದು ಸೇರಿದಂತೆ ದಿನದಿಂದ ದಿನಕ್ಕೆ ಕೆಲಸದ ಒತ್ತಡಗಳು ಹೆಚ್ಚುತ್ತಿವೆ’ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮಾ, ಗೌರವಾಧ್ಯಕ್ಷೆ ಬಿ.ಆರ್‌.ಜಯಲಕ್ಷ್ಮಿ, ಕಾರ್ಯದರ್ಶಿ ಉಮಾಮಣಿ, ವಿಶಾಲಕ್ಷಿ, ಬಿ.ಎಸ್‌.ನಿರ್ಮಲಾ, ಶಾಂತಾ, ಎನ್‌.ಪಿ.ಭಾರತಿ ಇದ್ದರು.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ