Breaking News

ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭ: ಸಿದ್ದರಾಮಯ್ಯ

Spread the love

ಹಾವೇರಿ,ಜನವರಿ20: ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭವಾಗುತ್ತದೆ ಎಂಬುದು ನಮ್ಮ ಆತಂಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಗುರುವಾರ ಹಾವೇರಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತಿ ಧರ್ಮಗಳ ಆಧಾರದ ಮೇಲೆ ಜನರನ್ನು ಕೆರಳಿಸಿ, ಸಮಾಜ ಒಡೆಯುವ ಕೆಲಸವನ್ನ ಬಿಜೆಪಿ ಮಾಡುತ್ತದೆ ಎಂದು ಕಿಡಿಕಾರಿದರು.

 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 104 ಸ್ಥಾನಗಳಲ್ಲಿ ಜಯಗಳಿಸಿದ್ದರಿಂದ ರಾಜ್ಯಪಾಲರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಲು ಕರೆದು, ನೀವು ಸದನದಲ್ಲಿ ಬಹುಮತ ಸಾಬೀತು ಮಾಡಬೇಕು ಎಂದಿದ್ದರು. ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತು ಮಾಡಲು ಸಾಧ್ಯವಾಗದ್ದರಿಂದ ಕೇವಲ ಮೂರು – ನಾಲ್ಕು ದಿನದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು. ನಂತರ ಜೆಡಿಎಸ್‌ ಜೊತೆಸೇರಿ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆವು.

ನಾವು 80 ಶಾಸಕರು ಇದ್ದರೂ ಕೂಡ 37 ಶಾಸಕರಿರುವ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಇದಕ್ಕೆ ಕಾರಣ ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬುದು. ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭವಾಗುತ್ತದೆ ಎಂಬುದು ನಮ್ಮ ಆತಂಕವಾಗಿತ್ತು. ಜಾತಿ ಧರ್ಮಗಳ ಆಧಾರದ ಮೇಲೆ ಜನರನ್ನು ಕೆರಳಿಸಿ, ಸಮಾಜ ಒಡೆಯುವ ಕೆಲಸ ಮಾಡುತ್ತಾರೆ.

1 ವರ್ಷ 2 ತಿಂಗಳು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರ ಅನೈತಿಕ ರಾಜಕಾರಣದಿಂದ ಅಧಿಕಾರ ಕಳೆದುಕೊಂಡರು. ನಮ್ಮ ಪಕ್ಷದ 14 ಶಾಸಕರು ತಮ್ಮನ್ನು ತಾವು ಮಾರಿಕೊಂಡು, ಜನರ ಅಭಿಪ್ರಾಯಕ್ಕೆ ಬೆಲೆ ಕೊಡದೆ ಬಿಜೆಪಿ ಸೇರಿದರು. ಈ ಆಪರೇಷನ್‌ ಕಮಲಕ್ಕೆ ಸುಮಾರು 1,000 ಕೋಟಿ ಹಣ ಖರ್ಚಾಗಿರಬಹುದು. ಇದು ರಾಜಕೀಯ ವ್ಯಭಿಚಾರ ಎಂದು ನಾನು ಅಂದೇ ಹೇಳಿದ್ದೆ. ಹೀಗೆ ಅನೈತಿಕ ಮಾರ್ಗದಲ್ಲಿ ಸರ್ಕಾರ ರಚನೆ ಆದರೆ ಜನರಿಗೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಿಲ್ಲ ಎಂದಿದ್ದೆ. ಆಪರೇಷನ್‌ ಕಮಲಕ್ಕೆ ಶಾಸಕರಿಗೆ 30 ರಿಂದ 35 ಕೋಟಿ ಹಣ ಕೊಟ್ಟಿದ್ದು ಯಡಿಯೂರಪ್ಪ ಅವರದ್ದು. ಯಡಿಯೂರಪ್ಪ ಅವರ ಮನೆಯಲ್ಲೇ ಯಾರಿಗೆ ಗುತ್ತಿಗೆ ಕೆಲಸ ಕೊಡಬೇಕು, ಯಾರಿಂದ ಎಷ್ಟು ವಸೂಲಿ ಮಾಡಬೇಕು ಎಂದು ತೀರ್ಮಾನವಾಗುತ್ತದೆ. ಇದನ್ನು ಹೇಳಿದ್ದು ಬಿಜೆಪಿಯ ಬಸನಗೌಡ‌ ಪಾಟೀಲ್ ಯತ್ನಾಳ್. ಯತ್ನಾಳ್‌ ಅವರು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ ತಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಆಗಲು 2000 ಕೋಟಿ ಮತ್ತು ಸಚಿವರಾಗಲು 100 ಕೋಟಿ ಹಣ ಕೊಡಬೇಕು ಎಂದರು. ಇದೆಲ್ಲ ನಿಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ವ ಬೊಮ್ಮಾಯಿ ಅವರೇ?

ನರೇಂದ್ರ ಮೋದಿ ಅವರೇ ಬಿಜೆಪಿಯ ಬಂಡವಾಳ. ಯಾಕೆಂದರೆ ರಾಜ್ಯದ ಬಿಜೆಪಿ ಜನರಿಗೆ ಹಳಸಲಾಗಿದೆ. ತಮ್ಮದು ಭ್ರಷ್ಟ ಸರ್ಕಾರ ಆದರೂ ಕೂಡ ಮೋದಿ ಅವರನ್ನು ನೋಡಿ ಜನ ತಮಗೆ ಮತ್ತೆ ಮತ ನೀಡುತ್ತಾರೆ ಎಂಬ ಭ್ರಮೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಇದ್ದಾರೆ. ” ನ ಖಾವೂಂಗ, ನ ಖಾನೆದೂಂಗ” ಎಂದಿದ್ದ ಮೋದಿ ಅವರು ರಾಜ್ಯ ಬಿಜೆಪಿ ನಾಯಕರಿಗೆ ಯಾಕೆ ಲಂಚ ತಿನ್ನಲು ಬಿಟ್ಟಿದ್ದಾರೆ? ಕೆಂಪಣ್ಣ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ. ಇವರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ, ಅದಕ್ಕೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದು ಕೆಂಪಣ್ಣ ಹೇಳಿದ್ದರು. ಬೇರೆಯವರ ಧಮ್‌, ತಾಕತ್‌ ಪ್ರಶ್ನೆ ಮಾಡುವ ಬೊಮ್ಮಾಯಿ ಅವರಿಗೆ ಧಮ್‌, ತಾಕತ್‌ ಇದ್ದರೆ ನ್ಯಾಯಾಂಗ ತನಿಖೆ ಮಾಡಿಸಲಿ.

ಕಳೆದ ಹಾನಗಲ್ ಉಪಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ 15 ದಿನ ಹಾನಗಲ್‌ ನಲ್ಲಿ ಟಿಕಾಣಿ ಹೂಡಿದ್ದರು. ಮಾವನ ಮನೆಯಲ್ಲಿ ಉಳಿದುಕೊಂಡು ಹೇಗಾದರೂ ಮಾಡಿ ಶ್ರೀನಿವಾಸ್‌ ಮಾನೆ ಅವರನ್ನು ಸೋಲಿಸಬೇಕು ಎಂದು ಕೆಲಸ ಮಾಡಿದ್ರು ಆದರೂ ಜನರು ನಮ್ಮ ಮಾತಿಗೆ ಬೆಲೆ ಕೊಟ್ಟು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ, ನಮ್ಮ ಶ್ರೀ‌ನಿವಾಸ್ ಮಾನೆ ಅವರನ್ನು ಗೆಲ್ಲಿಸಿದ್ರು. ಪಕ್ಕದ ಕ್ಷೇತ್ರದಲ್ಲೇ ಸೋತರೂ ಬೊಮ್ಮಾಯಿಗೆ ಇನ್ನು ಬುದ್ದಿ ಬಂದಿಲ್ಲ. ಭ್ರಷ್ಟಾಚಾರದಲ್ಲೇ ಇನ್ನೂ ಮುಳುಗಿ ಕೂತಿದ್ದಾರೆ. ದುರಂತ ಎಂದರೆ ಶಿಕ್ಷಣ ಕ್ಷೇತ್ರದ ಉಪ ಕುಲಪತಿಗಳಿಗೆ 10 ಕೋಟಿ ಲಂಚ ನಿಗದಿ ಮಾಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ