Breaking News
Home / ಜಿಲ್ಲೆ / ಬಿಜಾಪುರ / ಜೆಡಿಎಸ್ ಗೆ ಮತ್ತೊಂದು ಆಘಾತ

ಜೆಡಿಎಸ್ ಗೆ ಮತ್ತೊಂದು ಆಘಾತ

Spread the love

ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಯೋಧ ಶಿವಾನಂದ ಸೋಮನಾಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಿವಾನಂದ ಸೋಮನಾಳ (55) ಪಂಚರತ್ನ ರಥಯಾತ್ರೆ ಬಳಿಕ ತಮ್ಮ ಕ್ಷೇತ್ರ ಸಿಂದಗಿಗೆ ತೆರಳಿದ್ದರು. ಪರಿಚಯಸ್ಥರ ಮನೆಯಲ್ಲಿ ಕುಳಿತಿದ್ದ ಶಿವಾನಂದ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. 15 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಶಿವಾನಂದ ಸೋಮನಾಳ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿದ್ದರು.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ