Breaking News

ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

Spread the love

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. ಸಾಯಂಕಾಲದ ವೇಳೆ ಅವರು ಮಾತನಾಡಿರಬಹುದು ಎಂದು ಲೇವಡಿ ಮಾಡಿದ್ದಾರೆ.

 

ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗ್ತಾರೆ? ಈ ಹಿಂದೆ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುತ್ತೇವೆ ಎಂದು ಮನೆ ಬಾಗಿಲಿಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಗೆ ಹೋಗಿಲ್ಲ. ಬಿಜೆಪಿಯ ಯಾರೊಬ್ಬರೂ ಕಾಂಗ್ರೆಸ್ ಗೆ ಹೋಗಲ್ಲ ಎಂದರು.

ಬಿಜೆಪಿಯಿಂದ ನನಗೆ ಟಿಕೆಟ್ ಸಿಗಲಿ, ಬಿಡಲಿ ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಸೂಚಿಸುವ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ಸುರೇಶ್ ಗೌಡ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Spread the loveಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ