ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮನಾದ ನಾಯಕ ಕಾಂಗ್ರೆಸ್ನಲ್ಲಿ ಯಾರಿದ್ದಾರೆ ಹೇಳಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಸಿಂದಗಿಯಲ್ಲಿ ಶನಿವಾರ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬಿಎಸ್ವೈ, ಆ ಇಬ್ಬರು ನಾಯಕರು ಮತ್ತೊಮ್ಮೆ ಮೋದಿ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆ ಕೆಲಸ ಮಾಡ್ತಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇರೋದಿಲ್ಲ. ಎಲ್ಲಿದೆಯಪ್ಪಾ ಕಾಂಗ್ರೆಸ್? ನಿಮ್ಮ ನಾಯಕ ಯಾರು? ಎಂದು ಕಾಂಗ್ರೆಸ್ ಪಡೆಯನ್ನು ಅಣಕಿಸಿದರು.
ವಿಜಯಸಂಕಲ್ಪ ಅಭಿಯಾನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮೂಲಕ ಆರಂಭ ಆಗಿರೋದು ನಮ್ಮ ಸೌಭಾಗ್ಯ. ಹಣಬಲ, ತೋಳ್ಬಲದಿಂದ ಅಧಿಕಾರಕ್ಕೆ ಬರೋ ಕಾಲವಿಲ್ಲ, ಇದನ್ನು ಕಾಂಗ್ರೆಸ್ನವರು ಮರೆಯಬೇಕು. ಮೋದಿಜಿ ಅವರು ಜೆ.ಪಿ. ನಡ್ಡಾ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ನಾನೇ ಮುಂದಿನ ಮುಖ್ಯಮಂತ್ರಿ ಆಗ್ತೀನಿ ಎಂದು ಕೆಲವರು ತಿರುಕನ ಕನಸು ಕಾಣುತ್ತಿದ್ದಾರೆ. ಮೋದಿ, ನಡ್ಡಾ, ಅಮಿತ್ ಶಾ ಅವರ ನೇನೃತ್ವದಲ್ಲಿ 140ಕ್ಕೂ ಸ್ಥಾನ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತರುತ್ತೇವೆ. ದೇಶದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ ಎಂದರು.
Laxmi News 24×7