ಬೆಂಗಳೂರು: ಭ್ರಷ್ಟಾಚಾರ, ಗಂಭೀರ ಸ್ವರೂಪದ ದುರ್ನಡತೆ ಮತ್ತು ಕರ್ತವ್ಯಲೋಪ ಆರೋಪದಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಕೆಎಎಸ್ (ಆಯ್ಕೆ ಶ್ರೇಣಿ) ಅಧಿಕಾರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್ ಕುಮಾರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಮಾನತುಗೊಳಿಸಿದೆ.
‘
ಬಳಿಕ ಅರ್ಜಿಯನ್ನೇ ಸಲ್ಲಿಸದ 92 ಫಲಾನುಪೇಕ್ಷಿಗಳಿಗೆ ಸೌಲಭ್ಯ ನೀಡಿರುವುದು, 2019-20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಐರಾವತ ಮತ್ತು ಸಮೃದ್ಧಿ ಯೋಜನೆ ಅನುಷ್ಠಾನ ಮಾಡದೆ, ಆ ಅನುದಾನವನ್ನು 2022ರಲ್ಲಿ ಬಳಸಿ, 2018-19 ಸಾಲಿನ ಯೋಜನೆಗಳಲ್ಲಿ ಅರ್ಜಿಯನ್ನೇ ಸಲ್ಲಿಸದವರಿಗೆ ಮಂಜೂರಾತಿ ನೀಡಿದ ಆರೋಪ ಸುರೇಶ್ ಕುಮಾರ್ ಮೇಲಿದೆ.
‘ಲಭ್ಯ ದಾಖಲೆಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಶಿಫಾರಸುಗಳನ್ನು ಪರಿಶೀಲಿಸಿದಾಗ ಆರೋಪಗಳು ದೃಢಪಡುವಂತಿವೆ. ಹೀಗಾಗಿ ಹುದ್ದೆಯಲ್ಲಿ ಮುಂದುವರಿದರೆ ಸಾಕ್ಷ್ಯ ನಾಶಪಡಿಸುವ ಮತ್ತು ಮುಕ್ತವಾದ ತನಿಖೆಗೆ ಅಡ್ಡಿ ಉಂಟು ಮಾಡುವ ಸಂಭವ ಇರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಾನತು ಅವಧಿಯಲ್ಲಿ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡಬಾರದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.