ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, 10 ಕೆ.ಜಿ. ಅಕ್ಕಿಯನ್ನು ಕೊಡುವುದಾಗಿ ಭರವಸೆ ನೀಡಿದ್ದೇವೆ. ಅದನ್ನು ಈಡೇರಿಸುತ್ತೇವೆ. ಒಂದು ವೇಳೆ ಈಡೇರಿಸದೇ ಹೋದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ’ ಯಾತ್ರೆಯಲ್ಲಿ ಮಾತನಾಡಿರುವ ಅವರು, ‘ಈ ಬಗ್ಗೆ ಜಿಲ್ಲೆಯ ಪ್ರತಿಯೊಬ್ಬರಿಗೆ ಪಕ್ಷದ ಕಾರ್ಯಕರ್ತರೂ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕನಿಷ್ಠ 5 ಸ್ಥಾನಗಳನ್ನು ಗೆಲ್ಲಲೇಬೇಕು’ ಎಂದು ತಿಳಿಸಿದರು.
Laxmi News 24×7