Breaking News

ಸಂಕೇಶ್ವರ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಸಂಕೇಶ್ವರ : ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಕೇಶ್ವರ ನಗರದ ಹೊರವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ.

 

ಮೃತಪಟ್ಟಿರುವ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಅಪಘಾತದಲ್ಲಿ ಬೈಕ್ ಸವಾರನ ದೇಹವು ಮೂರು ಭಾಗವಾಗಿ ತುಂಡರಿಸಿದಂತಾಗಿದೆ. ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಪತ್ತೆ ಹಚ್ಚಲು ಸಂಕೇಶ್ವರ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಸಂಕೇಶ್ವರ ಸಿಪಿಐ ಪ್ರಹ್ಲಾದ ಚೆನ್ನಗೇರಿ ಮತ್ತು ಪಿಎಸ್ ಐ ಶಿವರಾಜ್ ನಾಯಿಕವಾಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ