ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಈಗ ನಡೆದಿರುವುದೆಲ್ಲ ಕೇವಲ ನಾಟಕ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದ ಬದಲು ಮೈಸೂರಿನಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ.
ಕೋಲಾರದಲ್ಲಿ ನಿಂತರೆ ಮನೆಗೆ ಹೋಗುವುದು ನಿಶ್ಚಿತ ಎಂಬುದು ಅವರಿಗೆ ಮನದಟ್ಟಾಗಿದೆ. ಒಂದು ವೇಳೆ ಅವರು ಮೈಸೂರಿನಿಂದ ಸ್ಪರ್ಧಿಸುವುದು ಖಚಿತವಾದರೆ ನಾವು ನಮ್ಮ ಕಾರ್ಯತಂತ್ರವನ್ನು ರೂಪಿಸುತ್ತೇವೆ ಎಂದರು.
ಸಿದ್ದರಾಮಯ್ಯ ಎರಡಲ್ಲ, ಮೂರು ಕಡೆ ಬೇಕಾದರೂ ಸ್ಪರ್ಧಿಸಲಿ. ಎಲ್ಲಿ ನಿಂತರೂ ಮನೆಗೆ ಹೋಗುವುದು ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದರು.
Laxmi News 24×7